PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ! | PSI Recruitment Scam accused Divya Hagaragi and 5 others issued Arrest Warrant like Dawood Ibrahim in 1993 Mumbai Blast Case


PSI Recruitment Scam: ದೇಶದ್ರೋಹಿ ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾ ಹಾಗರಗಿಗೂ ಅರೆಸ್ಟ್​ ವಾರಂಟ್ ಜಾರಿ!

ಆರೋಪಿ ದಿವ್ಯಾ ಹಾಗರಗಿ ನಾಪತ್ತೆ -ದಾವೂದ್ ಇಬ್ರಾಹಿಂಗೆ ಜಾರಿ ಮಾಡಿದಂತೆ ದಿವ್ಯಾಗೂ ಅರೆಸ್ಟ್​ ವಾರಂಟ್ ಜಾರಿ!

ಕಲಬುರಗಿ: ರಾಜ್ಯ ಪೊಲೀಸ್​ ಇಲಾಖೆಯಲ್ಲಿ ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ (PSI Recruitment Scam) ಅಕ್ರಮಗಳನ್ನು ಕಂಡು, ಇಂತಹ ಅಪರಾಧವೆಸಗಿರುವವರು ನಿಜಕ್ಕೂ ದೇಶದ್ರೋಹಿಗಳೇ ಸರಿ ಎಂದು ರೋಸಿಹೋದ ಜನ ಅದಾಗಲೇ ತೀರ್ಮಾನಿಸಿಯಾಗಿದೆ. ಈ ಮಧ್ಯೆ, ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು (CID) ಸಹ ಈ ಆರೋಪಿಗಳ ವಿರುದ್ಧ ದೇಶಭ್ರಷ್ಟ ದಾವೂದ್ ಇಬ್ರಾಹಿಂ 1993ರಲ್ಲಿ ಎಸಗಿದ್ದ ಮುಂಬೈ ಸ್ಫೋಟ ಪ್ರಕರಣವನ್ನು ಉಲ್ಲೇಖಿಸಿದ್ದಾರೆ. ಆ ಪ್ರಕರಣದಲ್ಲಿ ದೇಶದ್ರೋಹಿ ದಾವೂದ್ ಇಬ್ರಾಹಿಂನ ವಿರುದ್ಧ ಅರೆಸ್ಟ್​ ವಾರಂಟ್​ ಜಾರಿ (Arrest Warrant) ಮಾಡಲಾಗಿದೆ. ಅದರಂತೆ, ಪರಾರಿಯಾಗಿರುವ ದಿವ್ಯಾ ಹಾಗರಗಿ (Divya Hagaragi) ಸೇರಿದಂತೆ ಒಟ್ಟು ಆರು ಆರೋಪಿಗಳ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ್ದಾರೆ!

ಹೌದು, ಕರ್ನಾಟಕ ಪೊಲೀಸ್​ ಇಲಾಖೆಯಲ್ಲಿ 545 ಪೊಲೀಸ್​ ಸಬ್​ ಇನ್ಸ್​ ಪೆಕ್ಟರ್​ (ಪಿಎಸ್​ಐ -PSI) ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ವಿಚಾರ ದಿವ್ಯಾ ಹಾಗರಗಿ ಸೇರಿದಂತೆ 6 ಮಂದಿ ಆರೋಪಿಗಳಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಅರೆಸ್ಟ್ ವಾರಂಟ್ ಜಾರಿ ಮಾಡಿದ್ದಾರೆ. ಕಲಬುರಗಿ 3ನೇ JMFC ಕೋರ್ಟ್​​ನಿಂದ ವಾರಂಟ್ ಜಾರಿ ಮಾಡಲಾಗಿದೆ. ಮುಂಬೈ ದಾಳಿ ವೇಳೆ 1993 (Mumbai Blast Case) ದಾವೂದ್​ಗೂ ಅರೆಸ್ಟ್​ ವಾರಂಟ್ ಜಾರಿ ಮಾಡಲಾಗಿತ್ತು. ದಾವುದ್​​ ಇಬ್ರಾಹಿಂಗೂ (Dawood Ibrahim) ಕೋರ್ಟ್​​​​ ವಾರಂಟ್​​ ಜಾರಿ ಮಾಡಿದ್ದನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿಯೂ ಆರೋಪಿಗಳಿಗೆ ಸಿಐಡಿ ಪೊಲೀಸರು ವಾರಂಟ್ ಕೋರಿದ್ದರು. ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ, ಅರ್ಚನಾ, ಕಾಶಿನಾಥ್, ರವೀಂದ್ರ, ಶಾಂತಿಬಾಯಿಗೆ ವಾರಂಟ್​ ಜಾರಿ ಮಾಡಲಾಗಿದೆ. 1 ವಾರದೊಳಗೆ ಸಿಐಡಿ ಮುಂದೆ ಶರಣಾಗುವಂತೆ ವಾರಂಟ್​ ನಲ್ಲಿ ಸೂಚನೆ ನೀಡಲಾಗಿದೆ.

ತನಿಖೆಯ ಅವಧಿಯಲ್ಲಿಯೇ ಆರೋಪಿಗಳಿಗೆ ಅರೆಸ್ಟ್ ವಾರೆಂಟ್:
ಪಿ.ಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ದಿವ್ಯಾ ಸೇರಿ 6 ಜನ ಆರೋಪಿಗಳಿಗೆ ತನಿಖೆ ಅವಧಿಯಲ್ಲಿಯೇ ಆರೋಪಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ. ಕರ್ನಾಟಕದ ಅಪರಾಧ ಪ್ರಕರಣಗಳಲ್ಲಿ ಅಪರೂಪವಾದ ಪ್ರಕರಣ ಇದಾಗಿದೆ. ಮುಂಬೈ ಬ್ಲಾಸ್ಟ್ ಸಂದರ್ಭದಲ್ಲಿ ದಾವುದ್ ಇಬ್ರಾಹಿಂ ಗೆ ಕೋರ್ಟ್​ ಅರೆಸ್ಟ್ ವಾರೆಂಟ್ ನೀಡಿತ್ತು ಎಂದು ಆ ಪ್ರಕರಣ ಉಲ್ಲೇಖಿಸಿ, ಆರೋಪಿಗಳ ವಿರುದ್ಧಸಿಐಡಿ ಪೊಲೀಸರು ಅರೆಸ್ಟ್ ವಾರೆಂಟ್ ಕೋರಿದ್ದರು. ಕಲಬುರಗಿಯ 3ನೇ JMFC ಕೋರ್ಟ್​ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಆರೂ ಜನರಿಗೆ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

TV9 Kannada


Leave a Reply

Your email address will not be published.