Puneeth Rajkumar: ನಾಳೆ ರಾಜ್ಯದ 550 ಚಿತ್ರಮಂದಿರಗಳಲ್ಲಿ ಪುನೀತ್​ಗೆ ಪುಷ್ಪಾಂಜಲಿ, ಬಾಷ್ಪಾಂಜಲಿ, ಗೀತಾಂಜಲಿ ಮೂಲಕ ನಮನ | Karnataka Distributors organization conduct programs in 550 theatres on November 6 to pay tribute to Puneeth Rajkumar


ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನದಿಂದ ಚಿತ್ರರಂಗ ಕಂಬನಿ ಮಿಡಿದಿತ್ತು. ಚಿತ್ರರಂಗದ ವತಿಯಿಂದ ಪುನೀತ್​ಗೆ ನಮನ ಸಲ್ಲಿಸುವ ಹಲವು ಕಾರ್ಯಕ್ರಮಗಳೂ ನಡೆದಿವೆ. ಇದೇ ಮಾದರಿಯಲ್ಲಿ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರ ಪ್ರದರ್ಶಕರ ವಲಯ ಸಿದ್ಧತೆ ನಡೆಸಿದೆ. ಈ ಬಗ್ಗೆ ಟಿವಿ9 ಜತೆ ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್ ಮಾತನಾಡಿದ್ದಾರೆ. ಪುನೀತ್ ಅವರಿಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ (ನವೆಂಬರ್ 7) ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುತ್ತದೆ. ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:

Puneeth Rajkumar: ನವೆಂಬರ್ 16ರಂದು ಪುನೀತ ನಮನ ಕಾರ್ಯಕ್ರಮಕ್ಕೆ ಸಿದ್ಧತೆ, ದಕ್ಷಿಣ ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿ

Puneeth Rajkumar: ಪುನೀತ್ ರಾಜಕುಮಾರ್, ಸಂಚಾರಿ ವಿಜಯ್ ಪ್ರೇರಣೆ; ರಾಜ್ಯದಲ್ಲಿ ನೇತ್ರದಾನ ಶೇ.20-30ರಷ್ಟು ಹೆಚ್ಚಳ

TV9 Kannada


Leave a Reply

Your email address will not be published. Required fields are marked *