ಪುನೀತ್ ರಾಜ್ಕುಮಾರ್
ಬೆಂಗಳೂರು: ಪುನೀತ್ ರಾಜ್ಕುಮಾರ್ (Puneeth Rajkumar) ರಸ್ತೆ ನಾಮಕರಣಕ್ಕೆ ಅಧಿಕೃತ ಅನುಮೋದನೆ ನೀಡಲಾಗಿದೆ. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ ‘ಪುನೀತ್ ರಾಜ್ಕುಮಾರ್ ರಸ್ತೆ’ (Puneeth Rajkumar Road) ಎಂದು ನಾಮಕಾರಣ ಮಾಡುವ ಬಗ್ಗೆ ನಿರ್ಣಯ ಕೈಗೊಂಡು ಅಧಿಕೃತ ಅನುಮೋದನೆ ನೀಡಿದ್ದಾರೆ. ಮೈಸೂರು ರಸ್ತೆಯ ನಾಯಂಡ ಹಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್ವರೆಗಿನ 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗುತ್ತದೆ. ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ರಿಂದ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮತ್ತು ಆಡಳಿತಾಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಬಿಬಿಎಂಪಿ ಪುರಸ್ಕರಿಸಿದೆ.
ಪುನೀತ್ ರಾಜ್ಕುಮಾರ್ ರಸ್ತೆ ಹೊಸಕೆರೆ ಹಳ್ಳಿ, ದೇವೇಗೌಡ ಪೆಟ್ರೋಲ್ ಬಂಕ್ – ಕದಿರೇನ ಹಳ್ಳಿ ಪಾರ್ಕ್ – ಸಾರಕ್ಕಿ ಸಿಗ್ನಲ್ – ಜೆ.ಪಿ.ನಗರವನ್ನು ಸಂಪರ್ಕಿಸಲಿದೆ.