ಇತ್ತೀಚೆಗಷ್ಟೇ ನಟ ಪುನೀತ್ ರಾಜ್ಕುಮಾರ್ (Puneeth Rajkumar) ಅವರಿಗೆ ಬಸವಶ್ರೀ (BasavaSri) ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಇದೀಗ ಮುರುಘಾ ಮಠದ ಶ್ರೀಗಳು ಸದಾಶಿವನಗರದ ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬಸ್ಥರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದೇ ವೇಳೆ, ನೋವಿನಲ್ಲಿರುವ ಕುಟುಂಬಕ್ಕೆ ಶ್ರೀಗಳು ಸಾಂತ್ವನ ಹೇಳಿದ್ದಾರೆ. ಡಾ.ರಾಜ್ಕುಮಾರ್ (Dr.Rajkumar) ಅವರಂತೆಯೇ ಪುನೀತ್ ಜನಪ್ರಿಯತೆ ಗಳಿಸಿದವರು. ಅವರ ಅಗಲಿಕೆ ತುಂಬಲಾರದ ನಷ್ಟ. ಇಂತಹ ಸಂದರ್ಭದಲ್ಲಿ ಎಲ್ಲರೂ ಅವರ ಪಾರ್ಥಿವ ಶರೀರ ದರ್ಶನ ಮಾಡಿ ಪುನೀತರಾಗಿದ್ದಾರೆ. ಪ್ರತೀ ವರ್ಷದಂತೆ ಈ ವರ್ಷವೂ ಬಸವಶ್ರೀ ಪ್ರಶಸ್ತಿ ಕೊಡಲಾಗುತ್ತಿದ್ದು, ಪುನೀತ್ ಅವರಿಗೆ ನೀಡಲಾಗುತ್ತಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ ಎಂದು ಶ್ರೀಗಳು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಇಡೀ ಕುಟುಂಬ ಭಾಗಿಯಾಗಲಿದೆ ಎಂದು ಇದೇ ವೇಳೆ ಶ್ರೀಗಳು ನುಡಿದಿದ್ದಾರೆ.
ಇದನ್ನೂ ಓದಿ:
ನಟ ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ
Radhika Pandit: ಪುನೀತ್ ನಿಧನದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ರಾಧಿಕಾ ಪಂಡಿತ್