Puneeth Rajkumar Death: ಅಪ್ಪು ಹೆಸರಿನಲ್ಲಿ ಅನ್ನಸಂತರ್ಪಣೆ; ತಯಾರಿ ಹೇಗಿದೆ ಗೊತ್ತಾ? | Puneeth Rajkumar 12 Day Rituals Anna Santarpane to fans and family in Bengaluru


ಪುನೀತ್ ರಾಜ್ಕುಮಾರ್ (Puneeth Rajkumar) ಅಗಲಿ ಇಂದಿಗೆ ಅವರು ಅಗಲಿ ಇಂದಿಗೆ (ನವೆಂಬರ್ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಅನ್ನಸಂತರ್ಪಣೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ಇಂದು ಅಭಿಮಾನಿಗಳು, ಗಣ್ಯರಿಗೆ ಅನ್ನಸಂತರ್ಪಣೆ ಆಯೋಜನೆ ಮಾಡಲಾಗಿದೆ. ಎಲ್ಲಾ ಅಭಿಮಾನಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಊಟ ಸ್ವೀಕರಿಸಬಹುದು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸಕಲ ವ್ಯವಸ್ಥೆ ಮಾಡಲಾಗಿದೆ. 2 ಸಾವಿರಕ್ಕೂ ಹೆಚ್ಚು ಚೇರ್, ಊಟದ ಟೇಬಲ್ ಹಾಕಲಾಗಿದೆ. 600ಕ್ಕೂ ಹೆಚ್ಚು ಅಡುಗೆ ಭಟ್ಟರು, ಹೆಲ್ಪರ್ಗಳು ಭಾಗಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಯಿಂದ ಅನ್ನಸಂತರ್ಪಣೆ ಪ್ರಾರಂಭವಾಗಲಿದೆ.

20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಒಂದು ಸಾವಿರಕ್ಕೂ ಹೆಚ್ಚು ಬಾಣಸಿಗರಿಂದ ಅಡುಗೆ ರೆಡಿ ಮಾಡಲಾಗುತ್ತಿದೆ. 25 ಸಾವಿರ ಸೋನಾ ಮಸೂರಿ ಅಕ್ಕಿ, 750 ಲೀ. ಅಡುಗೆ ಎಣ್ಣೆ, 100 ಕಟ್ಟು ಪುದೀನ ಸೊಪ್ಪು, 100 ಕೆ.ಜಿ ಟೊಮ್ಯಾಟೋ, ತಲಾ 50 ಕೆ.ಜಿ ಈರುಳ್ಳಿ, ಬೆಳ್ಳುಳ್ಳಿ, 3 ಸಾವಿರ ಕೆ.ಜಿ. ಚಿಕನ್, 8500 ಕೋಳಿ ಮೊಟ್ಟೆ, 50, 60,70 ಮತ್ತು 80 ಕೆಜಿಯ ದೊಡ್ಡ ಪಾತ್ರೆಗಳಲ್ಲಿ ಗೀರೈಸ್ ತಯಾರಿ ಮಾಡಲಾಗುತ್ತಿದೆ. 50 ಕೆೆ.ಜಿಯ ಐದಾರು ದೊಡ್ಡ ಪಾತ್ರೆಗಳಲ್ಲಿ ಮೊಟ್ಟೆಗಳನ್ನು ಬೇಯಿಸಲಾಗುತ್ತಿದೆ. ಹನ್ನೊಂದು ಗಂಟೆ ಸುಮಾರಿಗೆ ಊಟ ಸಿದ್ಧವಾಗಲಿದೆ ಎಂದು ಹಿರಿಯ ಹೆಡ್ ಕುಕ್ ಹೊನಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ:
ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಮಾಡಬೇಕು ಎನ್ನುವ ಆಸೆ ಇಟ್ಟುಕೊಂಡಿದ್ದರು ಪುನೀತ್​

ಪುನೀತ್​ ರಾಜ್​ಕುಮಾರ್​ ಸಮಾಧಿಗೆ ಪೂಜೆ ಸಲ್ಲಿಸಿ, ಗಳಗಳನೆ ಅತ್ತ ಕಾಲಿವುಡ್​ ನಟ ಸಿದ್ದಾರ್ಥ್​

TV9 Kannada


Leave a Reply

Your email address will not be published. Required fields are marked *