ಪ್ರಾತಿನಿಧಿಕ ಚಿತ್ರ
ಇಂದು ಪಂಜಾಬ್ ವಿಧಾನಸಭೆ ಚುನಾವಣೆ. ಹಾಗೇ, ಉತ್ತರ ಪ್ರದೇಶದಲ್ಲೂ ಮೂರನೇ ಹಂತದ ಮತದಾನ ನಡೆಯುತ್ತಿದೆ. ಪಂಜಾಬ್ನಲ್ಲಿ ಒಟ್ಟು 117 ವಿಧಾನಸಭಾ ಕ್ಷೇತ್ರದಿಂದ 1304 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಛನ್ನಿ, ಆಮ್ ಆದ್ಮಿ ಪಾರ್ಟಿಯ ಭಗವಂತ್ ಮನ್, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಮಾಜಿ ಮುಖ್ಯಮಂತ್ರಿಗಳಾದ ಅಮರಿಂದರ್ ಸಿಂಗ್, ಪ್ರಕಾಶ್ ಸಿಂಗ್ ಬಾದಲ್ ಮತ್ತು ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಇತರರು ಇಂದು ಕಣದಲ್ಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಇಂದು16 ಜಿಲ್ಲೆಗಳ 59 ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿ ಜನರು ಮತ ಹಾಕಲಿದ್ದಾರೆ. ಮುಖ್ಯವಾಗಿ ಇವತ್ತು ಹತ್ರಾಸ್, ಫಿರೋಜಾಬಾದ್, ಇಟಾ, ಕಸಗಂಜ್, ಮೇನ್ಪುರಿ, ಫರೂಖಾಬಾದ್, ಕನ್ನೌಜ್, ಕರ್ಹಾಲ್ ಗಳಲ್ಲಿ ಇಂದು ಮತದಾನ ಇದೆ. ಕರ್ಹಾಲ್ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಪರ್ಧಿಸಿದ್ದು, ಬಿಜೆಪಿಯಿಂದ ಎಸ್ಪಿ ಬಾಘೇಲ್ ಪ್ರತಿಸ್ಪರ್ಧಿಯಾಗಿದ್ದಾರೆ.