ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ಹನುಮೇಶ್(5) ಮೃತ ಬಾಲಕ.
ರಾಯಚೂರು: ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ದೇವದುರ್ಗ (Devadurga) ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ. ಹನುಮೇಶ್(5) ಮೃತ ಬಾಲಕ. ಇನ್ನು ಅಸ್ವಸ್ಥರಾದವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೌದು ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಹೈರಾಣಾಗಿದ್ದಾರೆ. ಕಳೆದ ಎರಡು ದಿನಗಳಿಂದ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಳ್ಳುತ್ತಿದ್ದು, ಜಿಲ್ಲೆಯ ಅರಕೇರಾ, ದೇವದುರ್ಗ, ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇನ್ನು ಈ ಘಟನೆಗೆ ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದಾರೆ.
ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 42 ಜನ ಅಸ್ವಸ್ಥ
ಹಾವೇರಿ: ಇದೇ ಮೇ. 24 ರಂದು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕು ಆಸ್ಪತ್ರೆ ಫುಲ್ ಆಗಿ ಹೋಗಿತ್ತು. ಎಲ್ಲಿ ನೋಡಿದ್ರೂ ನರಳಾಡುತ್ತಾ ಮಲಗಿರೋ ಜನ. ಇದಕ್ಕೆಲ್ಲ ಕಾರಣ ಮದುವೆ ಆರತಕ್ಷತೆ ಊಟ ಎನ್ನಲಾಗುತ್ತಿತ್ತು. ಮದುವೆ ಆರಕ್ಷತೆಯ ಕಾರ್ಯಕ್ರಮದಲ್ಲಿ ಊಟ ಮಾಡಿದ್ದ 42 ಜನ ಅಸ್ವಸ್ಥರಾಗಿ ಆಸ್ಪತ್ರಗೆ ದಾಖಲಾಗಿದ್ದರು. ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ಚಪ್ರದಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕಳೆದ ಸೋಮವಾರ ಹರಿಹರ ತಾಲೂಕು ವಾಸನ ಎಂಬ ಗ್ರಾಮದಲ್ಲಿ ಮದುವೆ ನಡೆದಿತ್ತು. ಚಪ್ರದಹಳ್ಳಿ ಗ್ರಾಮದ ಶಂಕರಪ್ಪ ಹಿತ್ತಲಮನಿ ಎಂಬುವವರ ಪುತ್ರಿಯ ಮದುವೆ ಮುಗಿಸಿಕೊಂಡು ಸ್ವ ಗ್ರಾಮ ಚಪ್ರದಹಳ್ಳಿಗೆ ವಾಪಾಸಾಗಿದ್ದ ಗ್ರಾಮಸ್ಥರು ವಧುವಿನ ಮನೆಯಲ್ಲಿ ನಡೆದ ಆರಕ್ಷತೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು. ಕಾರ್ಯಕ್ರಮಕ್ಕೆ ಬಂದವರೆಲ್ಲ ಭರ್ಜರಿ ಊಟ ಸವಿದಿದ್ರು. ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಜನರಿಗೆ ನಿನ್ನೆ(ಮೇ.23) ರಾತ್ರಿ ಅಸ್ವಸ್ಥತೆ ಕಾಣಿಸಿಕೊಂಡಿತ್ತು.