Rajasthan: ರಾಜಸ್ಥಾನದಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, 8 ಜನರ ಬಂಧನ | 17 year old girl gang raped in Rajasthan, 8 people arrested


ರಾಜಸ್ಥಾನದ (Rajasthan) ಅಲ್ವಾರ್‌ನ ಕಿಶನ್‌ಗಢ್ ಬಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Rajasthan: ರಾಜಸ್ಥಾನದಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, 8 ಜನರ ಬಂಧನ

ಸಾಂದರ್ಭಿಕ ಚಿತ್ರ

Image Credit source: NDTV

ಅಲ್ವಾರ್: ರಾಜಸ್ಥಾನದ (Rajasthan) ಅಲ್ವಾರ್‌ನ ಕಿಶನ್‌ಗಢ್ ಬಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿಯ ಪ್ರಕಾರ, ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ನಂತರ ಅತ್ಯಾಚಾರದ ವೀಡಿಯೊವನ್ನು ಇಟ್ಟುಕೊಂಡು ಹುಡುಗಿಯನ್ನು ಬ್ಲ್ಯಾಕ್‌ಮೇಲ್ ಮಾಡಿ ಹಣ ನೀಡುವಂತೆ ಒತ್ತಾಯಿಸಿದ್ದರು.

ಪೊಲೀಸರ ಪ್ರಕಾರ, ಆರೋಪಿಗಳು ಈಗಾಗಲೇ ಸಂತ್ರಸ್ತ ಬಾಲಕಿಯಿಂದ 50,000 ರೂ. ಸುಲಿಗೆ ಮಾಡಿದ್ದಾರೆ ಮತ್ತು ವೀಡಿಯೊವನ್ನು ಇಂಟರ್ನೆಟ್‌ನಲ್ಲಿ ಅಪ್‌ಲೋಡ್ ಮಾಡದಿದ್ದಕ್ಕಾಗಿ 2,50,000 ರೂ. ಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಲಾಗಿದೆ. ಅರ್ಬಾಜ್, ಜಾವೇದ್, ಮುಸ್ತಕೀಮ್, ತಲೀಮ್, ಸಲ್ಮಾನ್, ಅಕ್ರಮ್, ಸಾಹಿಲ್ ಮತ್ತು ಅಕ್ರಮ್ ಎಂದು ಗುರುತಿಸಲಾದ ಈ ವ್ಯಕ್ತಿಗಳು ತಮಗೆ ಬೇಡಿಕೆಯಿರುವ ಮೊತ್ತವನ್ನು ನೀಡಲು ನಿರಾಕರಿಸಿದ ನಂತರ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಎಂಟು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನು ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು

ಅದೇ ಗ್ರಾಮದ ಎಂಟು ಜನರು ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ತಂದೆ ಆರೋಪಿಸಿದ್ದಾರೆ. ದೂರನ್ನು ತೆಗೆದುಕೊಳ್ಳಲಾಗಿದೆ ಮತ್ತು ಆರೋಪಿಗಳ ವಿರುದ್ಧ ಎಫ್‌ಐಆರ್ ಸಹ ದಾಖಲಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅಮಿತ್ ಚೌಧರಿ ಹೇಳಿದ್ದಾರೆ. ಪೊಲೀಸರ ಪ್ರಕಾರ, 2021ರ ಡಿಸೆಂಬರ್ 31 ರಂದು ಗೋಥಾರಾ ಬಳಿ ಸಾಹಿಲ್ ಎಂಬಾಂತ ಆಕೆಗೆ ಕರೆ ಮಾಡಿ ಆಕೆಯ ಕೆಲವು ಆಕ್ಷೇಪಾರ್ಹ ಚಿತ್ರಗಳನ್ನು ಕ್ಲಿಕ್ ಮಾಡಿ ನಾವು ಹೇಳಿದ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ ಇಲ್ಲದಿದ್ದರೆ ಈ ಫೋಟೋಗಳನ್ನು ವೈರಲ್ ಮಾಡುವುದಾಗಿ ಹೆದರಿಸಿದ್ದಾನೆ.

ಬಾಲಕಿ ಸ್ಥಳಕ್ಕಾಗಮಿಸಿದಾಗ ಎಂಟು ಮಂದಿ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಹಲ್ಲೆಯ ವಿಡಿಯೋವನ್ನು ಕೂಡ ಚಿತ್ರೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮೇಲೆ ಜನವರಿ 3 ಮತ್ತು ಏಪ್ರಿಲ್ 6 ರಂದು ಎರಡು ಬಾರಿ ಅತ್ಯಾಚಾರವೆಸಗಲಾಗಿದೆ ಎಂದು ಪೊಲೀಸರಿಗೆ ಹೆಚ್ಚಿನ ಮಾಹಿತಿ ನೀಡಲಾಗಿದೆ. ವೈರಲ್ ಆಗಿರುವ ವಿಡಿಯೋವನ್ನು ಬಾಲಕಿಯ ಮನೆಯವರಿಗೆ ತಿಳಿದಾಗ ವಿಷಯ ಬೆಳಕಿಗೆ ಬಂದಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.