Rajasthan Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು; ಅಶೋಕ್ ಗೆಹ್ಲೋಟ್ ಬಣದ 90 ಬಂಡಾಯ ಶಾಸಕರು ರಾಜೀನಾಮೆ | Rajasthan Crisis over 90 Congress MLAs from Team Ashok Gehlot resign in Rajasthan


ಬಂಡಾಯ ಶಾಸಕರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅಜಯ್ ಮಾಕೇನ್ ಮಾತುಕತೆಗೆ ಪ್ರಯತ್ನಿಸಿದರೂ ಅವರು ಭೇಟಿಗೆ ನಿರಾಕರಿಸಿದ್ದಾರೆ.

Rajasthan Crisis: ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು; ಅಶೋಕ್ ಗೆಹ್ಲೋಟ್ ಬಣದ 90 ಬಂಡಾಯ ಶಾಸಕರು ರಾಜೀನಾಮೆ

ಅಶೋಕ್ ಗೆಹ್ಲೋಟ್

ಜೈಪುರ: ರಾಜಸ್ಥಾನ ಕಾಂಗ್ರೆಸ್‌ನಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಸಿಎಂ ಅಶೋಕ್ ಗೆಹ್ಲೋಟ್ ಬಣದ 90 ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿನ್ ಪೈಲಟ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಬಗ್ಗೆ ಚರ್ಚೆಗಳು ನಡೆದಿರುವ ಹಿನ್ನೆಲೆಯಲ್ಲಿ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಸ್ಪೀಕರ್​ಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಂಡಾಯ ಶಾಸಕರೊಂದಿಗೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಅಜಯ್ ಮಾಕೇನ್ ಮಾತುಕತೆಗೆ ಪ್ರಯತ್ನಿಸಿದರೂ ಅವರು ಭೇಟಿಗೆ ನಿರಾಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ಅಶೋಕ್ ಗೆಹ್ಲೋಟ್ ಬಣದ ಶಾಸಕರು ನಿರಾಕರಿಸಿದ್ದಾರೆ. ಹೀಗಾಗಿ, ಮಲ್ಲಿಕಾರ್ಜುನ ಖರ್ಗೆ, ಅಜಯ್ ಮಾಕೇನ್ ದೆಹಲಿಗೆ ವಾಪಸಾಗಿದ್ದಾರೆ. ಈ ಬಗ್ಗೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಈ ಬಗ್ಗೆ ವರದಿ ಸಲ್ಲಿಸಲಿದ್ದಾರೆ. ಭಾನುವಾರ ರಾತ್ರಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬಣದ ಸುಮಾರು 90 ಶಾಸಕರು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ವಿಧಾನಸಭಾ ಸ್ಪೀಕರ್ ಸಿಪಿ ಜೋಶಿ ಅವರಿಗೆ ಬಂಡಾಯ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಕಾಂಗ್ರೆಸ್​ಗೆ ದೊಡ್ಡ ಸಂಕಷ್ಟ ಎದುರಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.