
ಭದ್ರತಾ ಮಂಡಳಿ ಪ್ರಾತಿನಿಧಿಕ ಚಿತ್ರ (ಎಡ), ರಾಷ್ಟ್ರಪತಿ ರಾಮನಾಥ್ ಕೋವಿಂದ್ (ಬಲ)
India | UN Security Council: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿದಂತೆ ಜಾಗತಿಕ ಸಂಸ್ಥೆಗಳ ತುರ್ತು ಸುಧಾರಣೆಗೆ ಕರೆ ನೀಡಿದ್ದಾರೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ (Ram Nath Kovind) ಅವರು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೇರಿದಂತೆ ಜಾಗತಿಕ ಸಂಸ್ಥೆಗಳ ತುರ್ತು ಸುಧಾರಣೆಗೆ ಕರೆ ನೀಡಿದ್ದಾರೆ. ಸಮಕಾಲೀನ ಜಾಗತಿಕ ಪರಿಸ್ಥಿತಿಯನ್ನು ಆ ಸಂಸ್ಥೆಗಳಲ್ಲಿ ಪ್ರತಿಬಿಂಬಿಸುವಂತೆ ಅವರು ಹೇಳಿದ್ದಾರೆ. ಕೆರೆಬಿಯನ್ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ರಾಷ್ಟ್ರಪತಿಯಾಗಿರುವ ರಾಮನಾಥ್ ಕೋವಿಂದ್ ಸೇಂಟ್ ವಿನ್ಸೆಂಟ್ ಮತ್ತು ಗ್ರೆನಡೀನ್ಸ್ ಹೌಸ್ ಅಸೆಂಬ್ಲಿಯ ವಿಶೇಷ ಸಭೆಯನ್ನುದ್ದೇಶಿಸಿ ಗುರುವಾರ ಮಾತನಾಡಿದರು. ಇಂದಿನ ಪರಸ್ಪರ ಅವಲಂಬಿತ ಜಗತ್ತಿನಲ್ಲಿ ಬಹುಪಕ್ಷೀಯತೆಯು ಅತ್ಯಂತ ಹೆಚ್ಚು ಪ್ರಸ್ತುತವಾಗಿದೆ ಎಂದು ಅವರು ಹೇಳಿದ್ದಾರೆ.