ಕೇರಳ ರಾಜ್ಯ ಪೊಲೀಸರನ್ನು ಪ್ರತಿನಿಧಿಸುವ ತಂಡ ಸೇರಿದಂತೆ ಒಟ್ಟು 38 ತಂಡಗಳು ಮತ್ತು 1,520 ಜನರು ಭಾಗವಹಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ಗಣರಾಜ್ಯೋತ್ಸವ ಭಾಷಣ ಮಾಡಲಿದ್ದಾರೆ.

ಮಾಣಿಕ್ ಷಾ ಪೆರೇಡ್ ಗ್ರೌಂಡ್
ಬೆಂಗಳೂರು: ಗಣರಾಜ್ಯೋತ್ಸವ ಸಂಭ್ರಮಾಚರಣೆಗೆ(Republic Day 2023) ಕ್ಷಣಗಣನೆ ಶುರುವಾಗಿದೆ. ಗಣರಾಜ್ಯೋತ್ಸವ ದಿನದ ಅದ್ದೂರಿ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪೆರೆಡ್ ಗ್ರೌಂಡ್(Manekshaw Parade Ground) ಸಕಲ ಪೂರ್ವ ತಯಾರಿಗಳಿಂದ ಮದುವಣಗಿತ್ತಿಯಂತೆ ಸಿದ್ದಗೊಂಡಿದೆ. ಪ್ರತಿವರ್ಷದಂತೆ ಈ ವರ್ಷ ಕೂಡ ನಗರದ ಎಂಜಿ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74ನೇ ಗಣರಾಜ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಗುವುದು. ಕರ್ನಾಟಕ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಪರೇಡ್ನಲ್ಲಿ ಕೇರಳ ರಾಜ್ಯ ಪೊಲೀಸರನ್ನು ಪ್ರತಿನಿಧಿಸುವ ತಂಡ ಸೇರಿದಂತೆ ಒಟ್ಟು 38 ತಂಡಗಳು ಮತ್ತು 1,520 ಜನರು ಭಾಗವಹಿಸಲಿದ್ದಾರೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ಗಣರಾಜ್ಯೋತ್ಸವ ಭಾಷಣ ಮಾಡಲಿದ್ದಾರೆ. ಗಣ್ಯರು, ಅತಿಗಣ್ಯರು, ಇತರೆ ಇಲಾಖೆಯವರು ಹಾಗೂ ಸಾರ್ವಜನಿಕರು ಸೇರಿ ಸುಮಾರು 7 ಸಾವಿರ ಮಂದಿ ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್, ರಕ್ಷಣಾ ಪಡೆಗಳು, ಸಿಆರ್ಪಿಎಫ್, ಎನ್ಸಿಸಿ ಕೆಡೆಟ್ಗಳು, ಸ್ಕೌಟ್ಸ್, ಗೈಡ್ಸ್, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ವಿವಿಧ 38 ತಂಡಗಳಿಂದ ಪಥಸಂಚಲನ ನಡೆಯಲಿದೆ. ಪಥಸಂಚಲನವಾದ ಬಳಿಕ ಸುಮಾರು 2 ಸಾವಿರ ವಿದ್ಯಾರ್ಥಿಗಳಿಂದ 3 ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಇದರ ಜೊತೆಗೆ ಕಾರ್ಯಕ್ರಮದಲ್ಲಿ ದ್ರವರೂಪದ ವಸ್ತುಗಳು, ನೀರು, ತಿಂಡಿ ಪದಾರ್ಥಗಳು, ಪಟಾಕಿ, ಸಿಗರೇಟು, ಕರ ಪತ್ರಗಳನ್ನು ಗ್ರೌಂಡ್ ಒಳಗಡೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ತಾಜಾ ಸುದ್ದಿ
ಇನ್ನು ಒಂದೇ ವೇದಿಕೆಯಲ್ಲಿ ನಡೆಯಲಿರುವ ಅದ್ದೂರಿ ಕಾರ್ಯಕ್ರಮಕ್ಕೆ ಮುಂಜಾಗೃತ ಕ್ರಮವಾಗಿ ಭಾರಿ ಬಿಗಿ ಭದ್ರತೆಯನ್ನು ನಿಯೋಜನೆ ಮಾಡಲಾಗಿದೆ. ಪ್ರಮುಖವಾಗಿ 9 ಡಿಸಿಪಿಗಳ ನೇತೃತ್ವದಲ್ಲಿ, 16 ಎಸಿಪಿ, 45 ಪೊಲೀಸ್ ಇನ್ಸ್ಪೆಕ್ಟರ್, 115 ಸಬ್ ಇನ್ಸ್ಪೆಕ್ಟರ್ ಹಾಗೂ 77 ಮಹಿಳ ಪೊಲೀಸ್ ಸಿಬ್ಬಂದಿಗಳು ಸೇರಿ 1200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಇನ್ನು ಕಾರ್ಯಕ್ರಮ ನಡೆಯಲಿರುವ ಸುತ್ತ ಮುತ್ತಲಿನ ಪ್ರದೇಶದಲ್ಲಿ 100ಕ್ಕೂ ಅಧಿಕ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಿಶೇಷವಾಗಿ ಕವಾಯತ್ತಿನಲ್ಲಿ ಈ ಬಾರಿ ಕೇರಳ ರಾಜ್ಯದ ಒಂದು ಸಶಸ್ತ್ರ ಪಡೆ ಭಾಗಿ ಯಾಗುತ್ತಿದೆ.. ಕಾರ್ಯಕ್ರಮದ ನಡುವೆ ಯಾವುದೇ ಸಂದರ್ಭದಲ್ಲಿ ಅಹಿತಕರ ಘಟನೆ ಸಂಭವಿಸಿದಲ್ಲಿ ಅಥವ ಅಗ್ನಿ ಅವಗಡ ಉಂಟಾದ ಸಂದರ್ಭದಲ್ಲಿ ಕ್ರಮಗೈಗೊಳ್ಳಲು ಆಂಬ್ಯಲೆನ್ಸ್, ವೈದ್ಯಕೀಯ ವ್ಯವಸ್ಥೆ ಮತ್ತು ಅಗ್ನಿ ಶಾಮಕ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.