Republic Day Flower Show 2022: 2022ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ | Karnataka govt green signal for republic day lalbagh flower show 2022


Republic Day Flower Show 2022: 2022ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್

2022ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಸ್ಥಗಿತಗೊಂಡಿದ್ದ ಫಲಪುಷ್ಪ ಪ್ರದರ್ಶನಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಲಾಲ್ ಬಾಗ್ನಲ್ಲಿ 2022ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಒಪ್ಪಿಕೆ ನೀಡಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ನಿರ್ಧರಿಸಿತ್ತು. ತೋಟಗಾರಿಕೆ ಇಲಾಖೆ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಕೊರೊನಾದಿಂದಾಗಿ ಕಳೆದ 2020ರ ಆಗಸ್ಟ್ 15 ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಲಾಗುವ ಫಲಪುಷ್ಪ ಪ್ರದರ್ಶನ, 2021ರ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಹಾಗೂ 2021ರ ಆಗಸ್ಟ್ ಫಲಪುಷ್ಪ ಪ್ರದರ್ಶನಕ್ಕೆ ಸರ್ಕಾರದಿಂದ ಅನುಮತಿ ಸಿಕ್ಕಿರಲಿಲ್ಲ. ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಈ ಬಾರಿ ಅಂದರೆ 2022ರ ಜನವರಿಯಲ್ಲಿ ಫಲಪುಷ್ಪ ಪ್ರದರ್ಶನ ನಡೆಸಲು ತೋಟಗಾರಿಕೆ ಇಲಾಖೆ ನಿರ್ಧರಿಸಿತ್ತು. ಅದರಂತೆಯೆ ಸರ್ಕಾರ ಕೂಡ ತೋಟಗಾರಿಕೆ ಇಲಾಖೆ ಮನವಿಗೆ ಸ್ಪಂದಿಸಿ ಲಾಲ್ ಬಾಗ್ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಒಪ್ಪಿಗೆ ನೀಡಿದೆ.

ಎಲ್ಲ ರೀತಿಯ ಆರ್ಥಿಕ ಚಟುವಟಿಕೆ, ಸೇವೆಗಳು, ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಿದೆ. ಹೀಗಾಗಿ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೆ ತೋಟಗಾರಿಕೆ ಇಲಾಖೆ ನಿರ್ಧಸಿತ್ತು. ಇದಕ್ಕೆ ಸರ್ಕಾರದಿಂದಲೂ ಒಪ್ಪಿಗೆ ಸಿಕ್ಕಿದೆ. ಅಗತ್ಯವಾದ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದೆ. ಕೊರೊನಾ ಕಡಿಮೆಯಾಗಿದ್ದರೂ, ಕೊರೊನಾ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಫಲಪುಷ್ಪ ಪ್ರದರ್ಶನಕ್ಕೆ ಆಗಮಿಸುವ ಮಕ್ಕಳ ಕುರಿತು ಜಾಗೃತಿ ವಹಿಸಬೇಕು. ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸರ್ಕಾರ ಸೂಚಿಸಿದ್ದು ಎಷ್ಟು ದಿನ ಪ್ರದರ್ಶನ ನಡೆಸಬೇಕು. ಯಾವ ದಿನದಿಂದ ಪ್ರಾರಂಭಿಸಬೇಕು. ಫಲಪುಷ್ಪ ಪ್ರದರ್ಶನಕ್ಕೆ ಉತ್ತಮ ವಿಷಯ ವಸ್ತು ಯಾವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿ ಶೀಘ್ರ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ತೋಟಗಾರಿಕಾ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಸಿಗಬೇಕಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಿದ್ದಾರೆ.

ಇದನ್ನೂ ಓದಿ: ಲಾಲ್ ಬಾಗ್ ಪ್ರವೇಶಕ್ಕೂ ತೆರಬೇಕಾ ದುಬಾರಿ ಶುಲ್ಕ.. ಎಂಟ್ರಿ ಶುಲ್ಕ ಸೇರಿ ಪಾರ್ಕಿಂಗ್ ದರ ಹೆಚ್ಚಳಕ್ಕೆ ಪ್ರಸ್ತಾಪ

TV9 Kannada


Leave a Reply

Your email address will not be published. Required fields are marked *