Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ | Rohit Sharma breaks Shahid Afridi’s long standing world record

1/6

ರಾಂಚಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ದದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಮ್ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ 36 ಎಸೆತಗಳಲ್ಲಿ 55 ರನ್ ಬಾರಿಸಿದ್ದರು.

2/6

 ಈ ಸ್ಪೋಟಕ ಇನಿಂಗ್ಸ್​ನಲ್ಲಿ ಹಿಟ್​ಮ್ಯಾನ್ ಬ್ಯಾಟ್​ನಿಂದ ಮೂಡಿಬಂದಿದ್ದು 1 ಫೋರ್ ಹಾಗೂ 5 ಭರ್ಜರಿ ಸಿಕ್ಸರ್​ಗಳು. ಈ ಸಿಕ್ಸ್​ನೊಂದಿಗೆ ರೋಹಿತ್ ಶರ್ಮಾ ಪಾಕಿಸ್ತಾನದ ಮಾಜಿ ಆಟಗಾರ ಶಾಹಿದ್ ಅಫ್ರಿದಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿದಿರುವುದು ವಿಶೇಷ.

3/6

ಹೌದು, 5 ಸಿಕ್ಸರ್​ನೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 450 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಇಷ್ಟೊಂದು ಸಿಕ್ಸ್​ಗಳನ್ನು ಬಾರಿಸಲು ರೋಹಿತ್ ಶರ್ಮಾ ತೆಗೆದುಕೊಂಡಿದ್ದು ಕೇವಲ 404 ಇನಿಂಗ್ಸ್​ ಮಾತ್ರ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 450 ಸಿಕ್ಸ್​ ಬಾರಿಸಿದ ವಿಶ್ವ ದಾಖಲೆ ಇದೀಗ ರೋಹಿತ್ ಶರ್ಮಾ ಪಾಲಾಗಿದೆ.

4/6

 ಇದಕ್ಕೂ ಮುನ್ನ ಈ ದಾಖಲೆ ಪಾಕಿಸ್ತಾನದ ಮಾಜಿ ಬ್ಯಾಟರ್ ಶಾಹಿದ್ ಅಫ್ರಿದಿ ಹೆಸರಿನಲ್ಲಿತ್ತು. ಅಫ್ರಿದಿ 487 ಇನಿಂಗ್ಸ್​ಗಳಲ್ಲಿ 450 ಸಿಕ್ಸ್ ಬಾರಿಸಿ ವಿಶ್ವ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ರೋಹಿತ್ ಶರ್ಮಾ ಮುರಿದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

5/6

ಇನ್ನು ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ದಾಖಲೆ ಕೂಡ ರೋಹಿತ್ ಶರ್ಮಾ ಹೆಸರಿನಲ್ಲಿದೆ. ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ರೋಹಿತ್ ಶರ್ಮಾ 3ನೇ ಸ್ಥಾನದಲ್ಲಿದ್ದಾರೆ.

6/6

ಅಗ್ರಸ್ಥಾನದಲ್ಲಿ ಕ್ರಿಸ್ ಗೇಲ್ (553) ಇದ್ದು, ನಂತರದ ಸ್ಥಾನದಲ್ಲಿ ಶಾಹಿದ್ ಅಫ್ರಿದಿ (476) ಇದ್ದಾರೆ. ಇದೀಗ 454 ಸಿಕ್ಸ್​ನೊಂದಿಗೆ ಹಿಟ್​ಮ್ಯಾನ್ 3ನೇ ಸ್ಥಾನ ಅಲಂಕರಿಸಿದ್ದಾರೆ.

TV9 Kannada

Leave a Reply

Your email address will not be published. Required fields are marked *