Roof Collapse: ರಾಯಚೂರಿನ ಶಾಲೆಯೊಂದರ ಮೇಲ್ಛಾವಣಿ ಕುಸಿತ, ಇಬ್ಬರು ವಿದ್ಯಾರ್ಥಿಗಳಿಗೆ ಗಾಯ – 2 students injured after roof collapses at Karnataka Public School in Raichur’s Maski


ರಾಯಚೂರಿನ ಶಾಲೆಯೊಂದರ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ, ಶಾಲೆಯ ಮೇಲ್ಛಾವಣಿ ಕುಸಿದ ಕಾರಣ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

ರಾಯಚೂರಿನ ಶಾಲೆಯೊಂದರ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ, ಶಾಲೆಯ ಮೇಲ್ಛಾವಣಿ ಕುಸಿದ ಕಾರಣ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.

ಅಪ್ಪಾಜಿ(7), ನಮನ್ (8) ಗಾಯಗೊಂಡ ವಿದ್ಯಾರ್ಥಿಗಳು, ಕಳೆದ 6-7 ವರ್ಷದ ಹಿಂದಷ್ಟೇ ಈ ಶಾಲಾ ಕೊಠಡಿಯನ್ನು ನಿರ್ಮಿಸಲಾಗಿತ್ತು. ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚೆಗೆ ಭಾರಿ ಮಳೆ ಸುರಿದಿದ್ದ ಕಾರಣ, ಮಳೆಯಿಂದ ಕಟ್ಟಡವು ಶಿಥಿಲಗೊಂಡಿತ್ತು. ತರಗತಿ ಕೊಠಡಿಯ ಬಾಗಿಲು ಹತ್ತಿರವೇ ಮೇಲ್ಛಾವಣಿ ಕುಸಿತಗೊಂಡಿದೆ.

ಮೊದಲ ಸಾಲಿನಲ್ಲಿ ‌ಕುಳಿತ ಇಬ್ಬರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಬಾರಿ ಉತ್ತರ ಕರ್ನಾಟಕವೂ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ, ಕಳೆದ ಒಂದು ವಾರದಿಂದ ಮಳೆ ಕೊಂಚ ಬಿಡುವು ಪಡೆದಿದ್ದರೂ ನವೆಂಬರ್ 1 ರಿಂದ ಮತ್ತೆ ರಾಜ್ಯದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಾರಿಯ ಭಾರಿ ಮಳೆಯಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದವು, ಸಾಕಷ್ಟು ಮಂದಿ ಮನೆಯನ್ನೇ ಕಳೆದುಕೊಂಡಿದ್ದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.