RR vs LSG Playing XI IPL 2022: ರಾಜಸ್ಥಾನ್ vs ಲಕ್ನೋ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ | RR vs LSG Playing XI IPL Rajasthan Royals Team Lucknow Super Giants Team players to watch out for in today IPL Match 10 April in Kannada


RR vs LSG Playing XI IPL 2022: ರಾಜಸ್ಥಾನ್ vs ಲಕ್ನೋ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

RR vs LSG Playing XI IPL 2022

ಐಪಿಎಲ್​ನ 20ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ಮತ್ತೊಂದು ಗೆಲುವನ್ನು ಎದುರು ನೋಡುತ್ತಿದ್ದರೆ, ಮತ್ತೊಂದೆಡೆ , ರಾಜಸ್ಥಾನ್ ರಾಯಲ್ಸ್ ತಂಡವು ಗೆಲುವಿನ ಟ್ರ್ಯಾಕ್‌ಗೆ ಮರಳಲು ಬಯಸುತ್ತಿದೆ. ಲಕ್ನೋ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಜಯದೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಮೂರು ಪಂದ್ಯಗಳಲ್ಲಿ ಎರಡು ಗೆಲುವಿನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ರಾಜಸ್ಥಾನ್ ರಾಯಲ್ಸ್ ತಂಡವು ಸತತ ಎರಡು ಗೆಲುವಿನ ನಂತರ ಕಳೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿತ್ತು. ತಂಡದ ಪರ, ಜೋಸ್ ಬಟ್ಲರ್ ಆರು ಸಿಕ್ಸರ್‌ಗಳೊಂದಿಗೆ ಅಜೇಯ 70 ರನ್ ಗಳಿಸಿದರು. ನಾಲ್ಕನೇ ವಿಕೆಟ್‌ಗೆ ಶಿಮ್ರಾನ್ ಹೆಟ್ಮೆಯರ್ (ಔಟಾಗದೆ 42) ಅವರ ಅಜೇಯ 83 ರನ್‌ಗಳ ಜೊತೆಯಾಟವು ಮೂರು ವಿಕೆಟ್‌ಗಳಿಗೆ 169 ರನ್ ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅವರ ನೆರವಿನಿಂದ ಐದು ಎಸೆತಗಳು ಬಾಕಿ ಇರುವಂತೆಯೇ ಆರು ವಿಕೆಟ್‌ಗೆ 173 ರನ್ ಗಳಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿತು. ಪಂದ್ಯಾವಳಿಯಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲುವಿನ ಹ್ಯಾಟ್ರಿಕ್ ಗೆಲುವನ್ನು ನಿಲ್ಲಿಸಿದರು.

ಲಕ್ನೋ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಅದರಂತೆ ತಂಡದಿಂದ ಎವಿನ್ ಲೆವಿಸ್ ಮತ್ತು ಆಂಡ್ರ್ಯೂ ಟೈ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಮಾರ್ಕಸ್ ಸ್ಟೊಯಿನಿಸ್ ಮತ್ತು ದುಷ್ಮಂತ ಚಮೀರಾ ಕಾಣಿಸಿಕೊಂಡಿದ್ದಾರೆ. ರಾಜಸ್ಥಾನ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ನವದೀಪ್ ಸೈನಿ ಬದಲಿಗೆ ಕುಲದೀಪ್ ಸೇನ್ ಮತ್ತು ಯಶಸ್ವಿ ಜೈಸ್ವಾಲ್ ಬದಲಿಗೆ ರಾಸಿ ವಾನ್ ಡೆರ್ ಡುಸೇನ್ ತಂಡದಲ್ಲಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ:

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಜೋಸ್ ಬಟ್ಲರ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್(ನಾಯಕ), ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಕುಲದೀಪ್ ಸೇನ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್

ಲಕ್ನೋ ಸೂಪರ್ ಜೈಂಟ್ಸ್ (ಪ್ಲೇಯಿಂಗ್ XI): ಕೆಎಲ್ ರಾಹುಲ್(ನಾಯಕ), ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ಕೃಷ್ಣಪ್ಪ ಗೌತಮ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್

TV9 Kannada


Leave a Reply

Your email address will not be published.