‘RSSನಿಂದ ಬಂದ ಬಿಜೆಪಿಗರು ರಾಷ್ಟ್ರ ನಿರ್ಮಾಣ ಮಾಡಿದ್ರೋ, ಲೂಟಿ ಹೊಡೆದ್ರೋ’- HDK ಪ್ರಶ್ನೆ

ಮಾನ್ಯ ಸಿ.ಟಿ ರವಿಯವರೇ 2006ಕ್ಕಿಂತ ಮೊದಲು ರಾಜ್ಯದಲ್ಲಿದ್ದ ಬಿಜೆಪಿ ನಾಯಕರ ಚೆರಿತ್ರೆ ಗಮನಿಸಿ. ಜನರ ಬಾಯಿಯಲ್ಲಿ ಅವರ ಹಗರಣಗಳ ಕಥೆಗಳಿವೆ. RSSನಿಂದ ಅವರೆಲ್ಲ ತರಬೇತಿ ಪಡೆದು ರಾಷ್ಟ್ರ ನಿರ್ಮಾಣ ಮಾಡಿದರೋ, ಜನರ ಹಣ ಲೂಟಿ ಹೊಡೆದು ತಮ್ಮ ಸಾಮ್ರಾಜ್ಯಗಳನ್ನು ನಿರ್ಮಾಣ ಮಾಡಿಕೊಂಡರೋ ಎನ್ನುವುದನ್ನು ತಿಳಿದುಕೊಳ್ಳಿ ಎಂದು ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಟ್ವೀಟ್​​ ಮಾಡಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕಂಡರಿಯದ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೇ ಬಿಜೆಪಿ ಸರಕಾರ. ಒಮ್ಮೆ ಹಳೆಯದನ್ನೆಲ್ಲ ನೆನಪು ಮಾಡಿಕೊಳ್ಳಿ. ಅಧಿಕಾರದಲ್ಲಿದ್ದಾಗ ದೇಶದ ಸಂಪತ್ತು, ಜನರ ತೆರಿಗೆ ಹಣ ಲೂಟಿ ಹೊಡೆಯುವ ಕೆಲಸ ಮಾಡಿಲ್ಲ ನಾವು. ನಮ್ಮ ಕುಟುಂಬ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿ ಅವರ ಮನೆಗಳ ಬೆಳಕಾಗಿದೆ ಎಂದರು.

ನನ್ನ ಸೇವಾ ಗುಣ, ನಿಸ್ವಾರ್ಥತೆ ಏನೆಂಬುದು ಜನರಿಗಿಂತ ಒಮ್ಮೆ ಸಂಕಷ್ಟಕ್ಕೆ ಸಿಲುಕಿದ್ದ ನಿಮಗೇ ಚನ್ನಾಗಿ ಗೊತ್ತಿದೆ ಎಂಬುದು ನನ್ನ ಭಾವನೆ. ಅಂದು ಆರೆಸ್ಸೆಸ್ ಮೇಲಿನ ನಿಷ್ಠೆ ನಿಮ್ಮನ್ನು ರಕ್ಷಣೆ ಮಾಡಲಿಲ್ಲ. ಹೆಚ್.ಡಿ.ಕುಮಾರಸ್ವಾಮಿಯ ನಿಸ್ವಾರ್ಥತೆಯ ಫಲಾನುಭವಿ ನೀವು. ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಿ ಸಿ.ಟಿ.ರವಿಯವರೇ ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಐಟಿ ದಾಳಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ -ಸಿಎಂ ಬೊಮ್ಮಾಯಿ

News First Live Kannada

Leave a comment

Your email address will not be published. Required fields are marked *