ರಾಜ್ಯದ ಸರಕಾರಿ ಸ್ವಾಮ್ಯದ ದೇಶದೆಲ್ಲೆಡೆ ಹೆಸರು ಮಾಡಿದ ಮೈಸೂರಿನ ನಾಲ್ವಡಿ ಕೃಷ್ಣರಾಜ್ ಒಡೆಯರ್ ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಅವರು ಸ್ಥಾಪನೆ ಮಾಡಿದ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಈಗ ಬಾಗಿಲು ಮುಚ್ಚುವ ಹಂತಕ್ಕೆ ಬಂದು ತಲುಪಿದೆ.

ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ
ಶಿವಮೊಗ್ಗ: ದೇಶಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದ ನೂರು ವರ್ಷ ಹಳೆಯದಾದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ( Visvesvaraya Iron and Steel Factory) ಮುಚ್ಚಲು ಭಾರತೀಯ ಉಕ್ಕು ಪ್ರಾಧಿಕಾರ (SAIL) ನಿರ್ಣಯ ಕೈಗೊಂಡಿದೆ. ಇದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಈಗ ಆರೋಪ ಮತ್ತು ಪ್ರತ್ಯಾರೋಪ ಹೋರಾಟ ಜೋರಾಗಿದೆ. ಕಳೆದ ಒಂದು ದಶಕಗಳಿಂದ ನಷ್ಟದಲ್ಲಿರುವ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ಕೊನೆಗೂ ಕೇಂದ್ರ ಸರಕಾರ ಮನಸ್ಸು ಮಾಡಲಿಲ್ಲ. ಸಾವಿರಾರು ಕೋಟಿ ಬಂಡವಾಳ ಹಾಕಿ ಶತಮಾನದ ಹಿಂದಿನ ಹಳೆ ತಂತ್ರಜ್ಞಾನದಿಂದ ಕಬ್ಬಿಣ ಮತ್ತು ಉಕ್ಕು ತಯಾರಿಸುತ್ತಿದೆ. ಬಿಳಿ ಆನೆ ಸಾಕಲು ಕೇಂದ್ರ ಸರಕಾರಕ್ಕೆ ಆಗುತ್ತಿಲ್ಲ. ಈ ಹಿನ್ನಲೆಯಲ್ಲೆ ಸಾವಿರಾರು ಕಾರ್ಮಿಕರ ಉಪಜೀವನಕ್ಕೆ ಆಧಾರವಾಗಿರುವ ವಿಐಎಸ್ಎಲ್ ಕಾರ್ಖಾನೆ ಬಹುತೇಕ ಬಾಗಿಲು ಮುಚ್ಚುವ ಹಂತಕ್ಕೆ ಬಂದು ನಿಂತಿದೆ.
ಇತ್ತೀಚೆಗಷ್ಟೆ ಯಡಿಯೂರಪ್ಪ ಅವರು ಶಿವಮೊಗ್ಗದಲ್ಲಿ ಮಾತನಾಡಿ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮ ಕೈ ಮೀರಿಹೋಯ್ತು ಎಂದಿದ್ದು ಕಾಂಗ್ರೆಸ್ ಮುಖಂಡರನ್ನ ಕೆರಳಿಸಿದೆ. ಯಡಿಯೂರಪ್ಪ ಹಾಗೂ ಪುತ್ರ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಈ ತನಕ ಕಾರ್ಖಾನೆ ಉಳಿಸುತ್ತೇವೆಂದು ಭರವಸೆ ಕೊಟ್ಟಿದ್ದರು. ಆದರೆ ಈ ಭರವಸೆ ಈಡೇರಿಸಲು ಇವರಿಂದ ಆಗಲಿಲ್ಲವೆಂದು ಭದ್ರಾವತಿಯ ಕಾಂಗ್ರೆಸ್ ಶಾಸಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಏನು ಇಲ್ಲ. ಯಾಕಂದ್ರೆ ಐದು ವರ್ಷಗಳ ಹಿಂದೆ ರಾಜ್ಯ ಸರ್ಕಾರ ಗಣಿ ನೀಡಿತ್ತು. ವಿಐಎಸ್ಎಲ್ ಫ್ಯಾಕ್ಟರಿಯನ್ನ ವ್ಯವಸ್ಥಿತವಾಗಿ ನಡೆಸುವುದಾಗಿ ಕೇಂದ್ರ ಭರವಸೆ ನೀಡಿತ್ತು.
ತಾಜಾ ಸುದ್ದಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಮಣದುರ್ಗದಲ್ಲಿ ಗಣಿ ನೀಡಿತ್ತು. ಆದರೆ ಕೇಂದ್ರ ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದ ಅಭಿವೃದ್ಧಿ ಇಲ್ಲವಾಗಿದೆ. ಈತನಕ ಮೂರು ಜನ ಕೇಂದ್ರ ಮಂತ್ರಿಗಳು ಬಂದು ಇಲ್ಲಿ ಬೊಗಳಿದ್ರು. ಒಬ್ಬರು 6,000 ಕೋಟಿ ಅಂದ್ರು ಇನ್ನೊಬ್ರು 3000 ಕೋಟಿ ಅಂದ್ರು. ಒಂದು ರೂಪಾಯಿ ಕೂಡ ಬಂದು ತಲುಪಿಲ್ಲ. ಬಿಜೆಪಿ ನಾಯಕರು ಈ ಕಾರ್ಖಾನೆಯನ್ನ ಮುಚ್ಚಲು ಬಿಡುವುದಿಲ್ಲ ಅಂತ ಹೇಳಿ ಈಗ ಮೋಸ ಮಾಡಿದರು. ಭದ್ರಾವತಿ ಜನರಿಗೆ ದ್ರೋಹ ಮಾಡಿದ್ದಾರೆ ನಾನಿದ್ದೇನೆ ನಾನಿದ್ದೇನೆ ಎಂದು ಹೇಳುತ್ತಾ ಜನರಿಗೆ ದ್ರೋಹ ಬಗೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.