Shyok River Ladakh Accident ಲಡಾಖ್‌ನ ಶ್ಯೋಕ್ ನದಿಗೆ ವಾಹನ ಉರುಳಿ ಬಿದ್ದು 7 ಯೋಧರು ಸಾವು | Vehicle fell into Shyok river in Ladakh 7 Soldiers Dead says army


26 ಸೈನಿಕರ ತಂಡವು ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್‌ನಿಂದ ಸಬ್ ಸೆಕ್ಟರ್ ಹನೀಫ್‌ನ ಮುಂದಿನ ಸ್ಥಳಕ್ಕೆ ತೆರಳುತ್ತಿತ್ತು. ಸರಿಸುಮಾರು 9 ಗಂಟೆಗೆ ಥೋಯಿಸ್‌ನಿಂದ ಸುಮಾರು 25 ಕಿಮೀ ದೂರದಲ್ಲಿ, ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಶ್ಯೋಕ್ ನದಿಯಲ್ಲಿ (ಅಂದಾಜು 50-60 ಅಡಿ ಆಳಕ್ಕೆ) ಬಿದ್ದಿತು

ಶ್ರೀನಗರ: ಶುಕ್ರವಾರ  26 ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದು ಲಡಾಖ್‌ನ (Ladakh) ತುರ್ತುಕ್ ಸೆಕ್ಟರ್‌ನಲ್ಲಿರುವ ಶ್ಯೋಕ್ ನದಿಗೆ (Shyok River) ಬಿದ್ದಿದ್ದು ಭಾರತೀಯ ಸೇನೆಯ ಕನಿಷ್ಠ ಏಳು ಯೋಧರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತದಲ್ಲಿ ಹಲವಾರು ಸೈನಿಕರು ಗಂಭೀರ ಗಾಯಗೊಂಡಿದ್ದಾರೆ. 26 ಸೈನಿಕರ ತಂಡವು ಪಾರ್ತಾಪುರದ ಟ್ರಾನ್ಸಿಟ್ ಕ್ಯಾಂಪ್‌ನಿಂದ (Transit Camp) ಸಬ್ ಸೆಕ್ಟರ್ ಹನೀಫ್‌ನ ಮುಂದಿನ ಸ್ಥಳಕ್ಕೆ ತೆರಳುತ್ತಿತ್ತು. ಸರಿಸುಮಾರು 9 ಗಂಟೆಗೆ ಥೋಯಿಸ್‌ನಿಂದ ಸುಮಾರು 25 ಕಿಮೀ ದೂರದಲ್ಲಿ, ವಾಹನವು ರಸ್ತೆಯಿಂದ ಸ್ಕಿಡ್ ಆಗಿ ಶ್ಯೋಕ್ ನದಿಯಲ್ಲಿ (ಅಂದಾಜು 50-60 ಅಡಿ ಆಳಕ್ಕೆ) ಬಿದ್ದಿತು. ವಾಹನದಲ್ಲಿದ್ದ ಎಲ್ಲಾ ಪ್ರಯಾಣಿಕರಿಗೆ ಗಾಯಗಳಾಗಿವೆ” ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಈವರೆಗೆ ಏಳು ಯೋಧರು ಸಾವಿಗೀಡಾಗಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ.ಗಂಭೀರ ಗಾಯಗೊಂಡವರವನ್ನು  ವೆಸ್ಟರ್ನ್ ಕಮಾಂಡ್‌ಗೆ ಸ್ಥಳಾಂತರಿಸಲು ವಾಯುಪಡೆಯಿಂದ ಸಹಾಯ ಕೋರಲಾಗಿದೆ ಎಂದು ಅವರು ಹೇಳಿದ್ದಾರೆ.

TV9 Kannada


Leave a Reply

Your email address will not be published. Required fields are marked *