Siddaramaiah says he will retire from politics and accept sannyasin if he has taken a paisa bribe | ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ: ಸಿದ್ಧರಾಮಯ್ಯ ಸವಾಲು


ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.

ಒಂದು ಪೈಸೆ ಲಂಚ ತೆಗೆದುಕೊಂಡಿದ್ದರೆ ತೋರಿಸಿ, ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುವೆ: ಸಿದ್ಧರಾಮಯ್ಯ ಸವಾಲು

ಸಿದ್ಧರಾಮಯ್ಯ

ಕೋಲಾರ: ನನ್ನ ಅವಧಿಯಲ್ಲಿ ಒಂದು ಪೈಸೆ ಲಂಚ ಸ್ವೀಕರಿಸಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಂಡು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದರು. ಕೋಲಾರ ಹೊರವಲಯದ ಟಮಕ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ರಾಜ್ಯದ ಜನ ಬಿಜೆಪಿ ಆಡಳಿತದಿಂದ ಬೇಸತ್ತಿದ್ದಾರೆ, ನೊಂದಿದ್ದಾರೆ. ಅನೇಕ ಕಷ್ಟಗಳನ್ನು ಅನುಭವಿಸಬೇಕಾದ ಪರಿಸ್ಥಿತಿ ನಿರ್ಮಾಣ ಆಗಿದೆ. ಈಗ ಲಂಚ ಕೊಡದಿದ್ದರೆ ಯಾವುದೇ ಕೆಲಸ ಆಗಲ್ಲ. ಬಿಜೆಪಿಯಂತಹ ಭ್ರಷ್ಡ ಸರ್ಕಾರ ರಾಜ್ಯದಲ್ಲಿ ಯಾವತ್ತೂ ಬಂದಿರಲಿಲ್ಲ. ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪತ್ರ ಬರೆದಿದ್ದರು. 40% ಕಮಿಷನ್​​ ಬಗ್ಗೆಯೂ ಕಲಾಪದಲ್ಲಿ ಚರ್ಚೆಗೆ ಅವಕಾಶ ಕೊಡಲಿಲ್ಲ. ಕಾಗೇರಿಯಂತಹ ಸ್ಪೀಕರ್​ರನ್ನು ನಾನು ಯಾವತ್ತೂ ನೋಡಿಯೇ ಇಲ್ಲ. ವಿಧಾನಸೌಧದ ಗೋಡೆಯೂ ಲಂಚ ಲಂಚ ಅಂತಾ ಪಿಸುಗುಡುತ್ತಿದೆ. ಮಸಾಲೆ ದೋಸೆ, ಉಪ್ಪಿಟ್ಟಿಗೆ ಇಷ್ಟು ಅನ್ನೋ ರೀತಿ ಬೋರ್ಡ್​ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧೆ ಮಾಡ್ತೇನೆ

ಇನ್ನು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ನಾನು ಈಗಾಗಲೇ ಹೇಳಿರುವಂತೆ ಕೋಲಾರದಿಂದ ಸ್ಪರ್ಧಿಸುತ್ತೇನೆ. ಪಕ್ಷದ ಹೈಕಮಾಂಡ್​ ಸೂಚಿಸಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *