Siddaramaiah talks about political retirement in hassan | Siddaramaiah: ಸಂಚಲನ ಮೂಡಿಸಿದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆ; ಹಾಸನ ಭಾಷಣದ ಸಂಪೂರ್ಣ ವಿವರ ಇಲ್ಲಿದೆ


ಹಾಸನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಟ್ಟಿಮಾತನಂತೆ ಸೌಲಭ್ಯಗಳನ್ನು ನೀಡದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

Siddaramaiah: ಸಂಚಲನ ಮೂಡಿಸಿದ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಹೇಳಿಕೆ; ಹಾಸನ ಭಾಷಣದ ಸಂಪೂರ್ಣ ವಿವರ ಇಲ್ಲಿದೆ

ಸಿದ್ದರಾಮಯ್ಯ

ಹಾಸನ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಕಾಂಗ್ರೆಸ್​ (Congress) ಪ್ರಜಾಧ್ವನಿ ಎಂಬ ಹೆಸರಿನ ಮೂಲಕ ಬಸ್​ ಯಾತ್ರೆ ಮಾಡುತ್ತಿದ್ದು, ಪ್ರಚಾರದ ಭರಾಟೆಯಲ್ಲಿ ವಿವಿಧ ಸೌಲಭ್ಯಗಳನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿದೆ. ಇದರಂತೆ ಜೆಡಿಎಸ್ (JDS)​ ಭದ್ರಕೋಟೆ, ದೊಡ್ಡಗೌಡರ (Devegowda) ತವರು ಜಿಲ್ಲೆ ಹಾಸನದಲ್ಲಿ (Hassan) ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕೊಟ್ಟಿಮಾತನಂತೆ ಸೌಲಭ್ಯಗಳನ್ನು ನೀಡದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.

ಹಾಸನದಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ಮಾತನಾಡಿ 7 ವಿಧಾನಸಭಾ ಕ್ಷೇತ್ರಗಳಲ್ಲಿ 5 ಕ್ಷೇತ್ರಗಳನ್ನಾದರೂ ಕಾಂಗ್ರೆಸ್ ಗೆಲ್ಲಲೇಬೇಕು. ನಾನು ಮುಖ್ಯಮಂತ್ರಿ ಆಗಿದ್ದಾಗ ಉಚಿತವಾಗಿ 7 ಕೆಜಿ ಅಕ್ಕಿ ಕೊಡುತ್ತಿದ್ದೆ. ಈಗ ಬಿಜೆಪಿಯವರು ಕೇವಲ 5 ಕೆಜಿ ಅಕ್ಕಿ ಕೊಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ಕೊಡುತ್ತೇವೆ. ಕುಟುಂಬದ ಹಿರಿಯ ಮಹಿಳೆಗೆ ತಿಂಗಳಿಗೆ ₹ 2 ಸಾವಿರ ನೀಡುತ್ತೇವೆ. ಉಚಿತವಾಗಿ ತಿಂಗಳಿಗೆ 200 ಯೂನಿಟ್​ ವಿದ್ಯುತ್ ಕೊಡುತ್ತೇವೆ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಕೊಟ್ಟ ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.

ತಾಜಾ ಸುದ್ದಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

TV9 Kannada


Leave a Reply

Your email address will not be published. Required fields are marked *