ಈ ವಾರದ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಮಗಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೂಡ ಕೊರೊನಾ ಸೋಂಕು ತಗುಲಿತ್ತು.

ಸೋನಿಯಾ ಗಾಂಧಿ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರಿಗೆ ಇಂದು ಮತ್ತೊಮ್ಮೆ ಕೊವಿಡ್-19 (COVID-19) ಪಾಸಿಟಿವ್ ದೃಢಪಟ್ಟಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕೊವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಸರ್ಕಾರಿ ಪ್ರೋಟೋಕಾಲ್ ಪ್ರಕಾರ ಅವರು ಕ್ವಾರಂಟೈನ್ ಆಗಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jairam Ramesh) ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ಸೋನಿಯಾ ಗಾಂಧಿ ಅವರ ಮಗಳು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾಗೆ ಕೂಡ ಕೊರೊನಾ ಸೋಂಕು ತಗುಲಿತ್ತು. ಜೂನ್ ಆರಂಭದಲ್ಲಿ ಸೋನಿಯಾ ಗಾಂಧಿ ಅವರಿಗೆ ಕೊವಿಡ್-19 ದೃಢಪಟ್ಟಿತ್ತು. ಅವರಿಗೆ ಕೊರೊನಾವೈರಸ್ ಪತ್ತೆಯಾದ ನಂತರ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೂನ್ 20ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು.
Congress President Smt.Sonia Gandhi has tested positive for Covid-19 today. She will remain in isolation as per Govt. protocol.
आज कांग्रेस अध्यक्ष श्रीमती सोनिया गांधी का कोविड-19 टेस्ट रिपोर्ट पॉजिटिव आया है। वह सरकार द्वारा जारी प्रोटोकॉल का पालन करते हुए आइसोलेशन में रहेंगी।
— Jairam Ramesh (@Jairam_Ramesh) August 13, 2022