ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್‍ಗೆ ಎಂಟ್ರಿ

 

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್ ನ 12ನೇ ದಿನವಾದ ಇಂದು ಭಾರತೀಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ಫೈನಲ್ ಪ್ರವೇಶಿಸಿದ್ದಾರೆ.

ನೀರಜ್ ಚೋಪ್ರಾ ಪೂಲ್ ‘ಎ’ನಲ್ಲಿದ್ದರು. ನೀರಜ್ ತಮ್ಮ ಮೊದಲ ಪ್ರಯತ್ನದಲ್ಲಿಯೇ 86.65 ಮೀಟರ್ ಥ್ರೋ ಮಾಡುವ ಮೂಲಕ ಭಾರತಕ್ಕೆ ಮತ್ತೊಂದು ಪದಕದ ನಿರೀಕ್ಷೆಯನ್ನು ಮೂಡಿಸಿದರು. ತಮ್ಮ ಮೊದಲ ಥ್ರೋನಲ್ಲಿಯೇ ಫೈನಲ್ ನಲ್ಲಿ ನೀರಜ್ ಸ್ಥಾನಗಿಟ್ಟಿಸಿಕೊಂಡರು. ಇದನ್ನೂ ಓದಿ: ಮೊದಲ ಬಾರಿಗೆ ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದ ಭಾರತೀಯ ಮಹಿಳಾ ಹಾಕಿ ತಂಡ

ಬೆಳಗ್ಗೆ 11 ಗಂಟೆಗೆ ಮಹಿಳೆಯರ 69 ಕೆಜಿ ವಿಭಾಗದ ಬಾಕ್ಸಿಂಗ್ ಸೆಮಿಫೈನಲ್ ಪಂದ್ಯ ನಡೆಯಲಿದೆ. ಭಾರತದ ಲವ್ಲಿನಾ ಟರ್ಕಿಯ ಬುಸೆನಾಜ್ ಸುರ್ಮೆನ್ಲಿ ವಿರುದ್ಧ ಸೆಣಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಮಹಿಳೆಯ ಹಾಕಿ ತಂಡ ಅರ್ಜೆಂಟಿನಾ ವಿರುದ್ಧ ಸೆಮಿಫೈನಲ್ ಆಡಲಿದೆ. ಇದನ್ನೂ ಓದಿ: ಚಿನ್ನ ಗೆದ್ದ ಖುಷಿಗೆ ಅಂಗಿ ಹರಿದುಕೊಂಡು ಸಂಭ್ರಮ ಪಟ್ಟ ಕ್ರೀಡಾಪಟು

Source: publictv.in Source link