ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರದಲ್ಲೇ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ‌ ಎಂದು ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಈ‌ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು.. ಪರೀಕ್ಷೆಗಳ ಬಗ್ಗೆ ಶಿಕ್ಷಕರು, ಶಿಕ್ಷಣ ತಜ್ಞರು ಮತ್ತು ಪೋಷಕ ವರ್ಗಗಳ‌‌ ಜೊತೆ ವ್ಯಾಪಕ ಸಮಾಲೋಚನಾ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಸೂಕ್ತ ನಿರ್ಧಾರಕ್ಕೆ ಬರಲಾಗುತ್ತದೆ. ಕೆಲವೇ ಕೆಲವು ದಿನಗಳಲ್ಲಿ ನಿರ್ಧಾರವನ್ನ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

The post SSLC, ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವರು ಇವತ್ತು ಹೇಳಿದ್ದೇನು..? appeared first on News First Kannada.

Source: newsfirstlive.com

Source link