ಬೆಂಗಳೂರು: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿರುವ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಟ್ವೀಟ್​​ ಮಾಡಿರುವ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್​​ ಕುಮಾರ್​ ಅವರು ಪೂರ್ವಭಾವಿಯಾಗಿ ನನ್ನೊಂದಿಗೆ ಚರ್ಚಿಸಿ, SSLC ಪರೀಕ್ಷೆಗೆ ದಿನಾಂಕ ನಿಗದಿಪಡಿಸುವ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಮಗ್ರವಾಗಿ ಚರ್ಚಿಸಿದ ನಂತರವೇ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಇದು ಏಕಪಕ್ಷೀಯ ತೀರ್ಮಾನವಲ್ಲ. ಈ ಬಗ್ಗೆ ಗೊಂದಲ ಸೃಷ್ಟಿಸುವುದು ಅನಗತ್ಯ ಎಂದು ಯಡಿಯೂರಪ್ಪ ಹೇಳಿದ್ದಾರೆ.

The post SSLC ಪರೀಕ್ಷೆ ದಿನಾಂಕ ನಿಗದಿ- ಸಚಿವರ ನಡೆ ಸಮರ್ಥಿಸಿಕೊಂಡ ಸಿಎಂ appeared first on News First Kannada.

Source: newsfirstlive.com

Source link