
ರಾಯಚೂರು ಶಾಸಕ ಶಿವರಾಜ್ ಪಾಟೀಲ್ ಮತ್ತು ಪುತ್ರಿ ಸಾಕ್ಷಿ ಪಾಟೀಲ್
ಈ ಬಾರಿ 145 ವಿದ್ಯಾರ್ಥಿಗಳು ಮೊದಲ ರ್ಯಾಂಕ್ನಲ್ಲಿ ತೇರ್ಗಡೆಗೊಂಡಿದ್ದಾರೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರಾಯಚೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಪ್ರಕಟಿಸಿದೆ. ಈ ಬಾರಿ 145 ವಿದ್ಯಾರ್ಥಿಗಳು ಮೊದಲ ರ್ಯಾಂಕ್ನಲ್ಲಿ ತೇರ್ಗಡೆಗೊಂಡಿದ್ದಾರೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಪುತ್ರಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಪೂರ್ಣ ಪ್ರಜ್ಞಾ ಪ್ರೌಢಶಾಲೆ ವಿದ್ಯಾರ್ಥಿನಿ ಸಾಕ್ಷಿ ಪಾಟೀಲ್ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ತಂದೆ ಹಾಗೂ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಬೆಂಗಳೂರು ನಗರದ ಪೂರ್ಣ ಪ್ರಜ್ಞಾ ಶಾಲೆಯಲ್ಲಿ ಓದುತ್ತಿದ್ದ ಸಾಕ್ಷಿ ಪಾಟೀಲ್ ಇಂಥಗ ಸಾಧನೆ ಮಾಡಿದ್ದಾರೆ. ಎಲ್ಲಾ ಒಟ್ಟು 625 ಕ್ಕೆ 625 ಅಂಕಗಳನ್ನು ಪಡೆಯೋ ಮೂಲಕ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದಾರೆ. ಈ ಬಗ್ಗೆ ಶಾಸಕ ಡಾ.ಶಿವರಾಜ್ ಪಾಟೀಲ್ ಟಿವಿ9 ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬಹಳ ಸಂತೋಷದ ವಿಷಯ. ಆಕೆಯೇ ಕರೆ ಮಾಡಿ,ರ್ಯಾಂಕ್ ಬಂದಿರೊ ವಿಚಾರ ಹೇಳಿದ್ಲು. ಈ ಸಾಧನೆಯಲ್ಲಿ ನನ್ನ ಪಾತ್ರವಿಲ್ಲ. ಆಕೆ ತಾಯಿ ಹಾಗೂ ಮಗಳ ಪಾತ್ರವೇ ಹೆಚ್ಚು. ಇಬ್ಬರು ಮಕ್ಕಳಿಗೆ ಸ್ವಾತಂತ್ರ್ಯ ಕೊಟ್ಟಿದಿನಿ. ಅವರ ತಾಯಿಯ ಕೊಡುಗೆಯಿಂದ ಇದೆಲ್ಲಾ ಸಾಧ್ಯವಾಗಿದೆ. ಇದರ ಶ್ರೇಯಸ್ಸು ಆಕೆ ತಾಯಿಗೆ ಸಲ್ಲಬೇಕು. ಓದಬೇಕಾದರೇ,ಅರ್ಥ ಮಾಡ್ಕೊಂಡು ಶಿಸ್ತಿನಿಂದ ಓದಿ ಅಂತಿದ್ದೆ. ರಾತ್ರಿಯೆಲ್ಲಾ ನಿದ್ದೆಗೆಟ್ಟು ಓದೋದ್ರಲ್ಲಿ ಪ್ರಯೋಜನವಿಲ್ಲ. ಹೀಗಂತ ಅಡ್ವೈಸ್ ಮಾಡ್ತಿದ್ದೆ ಎಂದು ಶಾಸಕ ಶಿವರಾಜ್ ಪಾಟೀಲ್ ತಿಳಿಸಿದ್ದಾರೆ. ಶಾಸಕರು ಮಗಳ ಸಾಧನೆಯಲ್ಲಿ ತಮ್ಮ ಪಾತ್ರವಿಲ್ಲ ತಮ್ಮ ಪತ್ನಿ ಪಾತ್ರವಿದೆ ಅಂತ ಪತ್ನಿಗೆ ಕ್ರೆಡಿಟ್ ಕೊಟ್ಟ ವೇಳೆ ಅವರ ಕಾರ್ಯಕರ್ತರು ಚಪ್ಪಾಳೆ ತಟ್ಟು ಅಭಿನಂದಿಸಿದ್ರು.
ವಿಜಯಪುರ ಜಿಲ್ಲೆಯಲ್ಲಿ ಆರು ವಿದ್ಯಾರ್ಥಿಗಳು ಟಾಪರ್
625ಕ್ಕೆ 625 ಅಂಕ ಪಡೆಯುವ ಮೂಲಕ 6 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಅಮಿತ್ ಮಾದರ, ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಇಂಗ್ಲೀಷ್ ಮಾಧ್ಯಮದ ಐಶ್ವರ್ಯ ಈರಣ್ಣ ಕನಸೆ, ಸಿಂದಗಿ ತಾಲೂಕಿನ ವಿಭೂತಿಹಾಳ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಸ್ವಾತಿ ಗೌಡಪ್ಪ ಮಲ್ಲೇದ. ವಿಜಯಪುರ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ರಕ್ಷಿತಾ ಸುರೇಶ ಚಿನಿವಾರ, ತಾಳಿಕೋಟೆ ಪಟ್ಟಣದ ಸರ್ವಜ್ಞ ವಿದ್ಯಾಪೀಠ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಶ್ರೇಯಾ ದೇಸಾಯಿ, ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸಫರ್ಡ್ ಇಂಗ್ಲಿಷ್ ಮಾಧ್ಯಮ ಪ್ರೌಢ ಶಾಲೆಯ ಯಲ್ಲಾಲಿಂಗ ಬಸಪ್ಪ ಸುಳಿಭಾವಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾರೆ.