ಟಿ20 ವಿಶ್ವಕಪ್ ಟೂರ್ನಿಗೂ ಮುನ್ನವೇ ವಿರಾಟ್ ಕೊಹ್ಲಿ ಹಾಗೂ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಜತೆ ಬಿಸಿಸಿಐ ಸಂಬಂಧ ಹದಗೆಟ್ಟಿತ್ತು ಎಂದು ಪಾಕಿಸ್ತಾನ ತಂಡದ ದಿಗ್ಗಜ ಕ್ರಿಕೆಟಿಗ ಇಂಜಮಾಮ್ ಉಲ್ ಹಕ್ ಹೇಳಿದ್ದಾರೆ.
ಈ ಸಂಬಂಧ ಮಾತಾಡಿದ ಇಂಜಮಾಮ್ ಉಲ್ ಹಕ್, ಕೊಹ್ಲಿ ಹಾಗೂ ರವಿಶಾಸ್ತ್ರಿ ಜತೆ ಬಿಸಿಸಿಐ ಸಂಬಂಧ ಹದಗೆಟ್ಟಿತ್ತು. ಹೀಗಾಗಿಯೇ ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲು ಘೋಷಿಸಿದರು. ಇದು ವಿರಾಟ್ ಕೊಹ್ಲಿ ಮೇಲೆ ಎಷ್ಟು ಒತ್ತಡವಿತ್ತು ಎನ್ನುವುದಕ್ಕೆ ಸ್ಪಷ್ಟ ನಿದರ್ಶನ ಎಂದರು.