T20 World Cup 2021: ಭರ್ಜರಿ ಗೆಲುವಿನೊಂದಿಗೆ ದಾಖಲೆ ಬರೆದ ಟೀಮ್ ಇಂಡಿಯಾ | Wins with most balls to spare for india in t20is zp

1/5

ಸ್ಕಾಟ್ಲೆಂಡ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆ ಬರೆದಿದೆ. ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ಕೇವಲ 85 ರನ್​ಗೆ ಆಲೌಟ್ ಆಯಿತು.

2/5

 ಈ ಸಾಧಾರಣ ಸವಾಲು ಬೆನ್ನತ್ತಿದ ಟೀಮ್ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ರಾಹುಲ್ ಭರ್ಜರಿ ಆರಂಭ ಒದಗಿಸಿದ್ದರು. ಈ ಜೋಡಿ 5 ಓವರ್​ನಲ್ಲಿ 70 ರನ್ ಬಾರಿಸಿ ಭರ್ಜರಿ ಜೊತೆಯಾಟವಾಡಿದ್ದರು.

3/5

ಅದರಂತೆ ಟೀಮ್ ಇಂಡಿಯಾ ಕೇವಲ 6.3 ಓವರ್​ನಲ್ಲಿ ಗೆಲುವು ದಾಖಲಿಸಿತು. ಅಂದರೆ 39 ಬಾಲ್​ನಲ್ಲಿ ಚೇಸ್ ಮಾಡುವ ಮೂಲಕ ಟೀಮ್ ಇಂಡಿಯಾ 81 ಎಸೆತಗಳನ್ನು ಬಾಕಿ ಉಳಿಸಿದರು.

4/5

ಇದು ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪಾಲಿಗೆ ದಾಖಲೆಯಾಗಿದೆ. ಇದಕ್ಕೂ ಮುನ್ನ2016 ರಲ್ಲಿ ಯುಎಇ ವಿರುದ್ದ ಭಾರತ 59 ಬಾಲ್ ಬಾಕಿ ಇರುವಾಗ ಗೆದ್ದಿರುವುದು ದಾಖಲೆಯಾಗಿತ್ತು. ಇದೀಗ 81 ಎಸೆತಗಳು ಬಾಕಿ ಇರುವಾಗಲೇ ಭರ್ಜರಿ ಜಯ ಸಾಧಿಸಿ ಹೊಸ ಇತಿಹಾಸ ನಿರ್ಮಿಸಿದೆ.

5/5

ಈ ಭರ್ಜರಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ ಸೆಮಿಫೈನಲ್ ಖಚಿತಪಡಿಸಿಲ್ಲ ಎಂಬುದು ವಿಶೇಷ. ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ನ್ಯೂಜಿಲೆಂಡ್ ವಿರುದ್ದ ಗೆದ್ದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಇರಲಿದೆ.

TV9 Kannada

Leave a Reply

Your email address will not be published. Required fields are marked *