T20 World Cup 2021: ಸೆಮಿಫೈನಲ್​ಗೇರಿದ ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್ | Tymal Mills ruled out of T20 World Cup 2021


T20 World Cup 2021: ಸೆಮಿಫೈನಲ್​ಗೇರಿದ ಇಂಗ್ಲೆಂಡ್ ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಔಟ್

England Team

ಟಿ20 ವಿಶ್ವಕಪ್​ 2021 ರಲ್ಲಿ ಸತತ ನಾಲ್ಕು ಗೆಲುವು ದಾಖಲಿಸಿ ಸೆಮಿಫೈನಲ್​ಗೇರಿರುವ ಇಂಗ್ಲೆಂಡ್ ತಂಡಕ್ಕೆ ನಿರ್ಣಾಯಕ ಹಂತದಲ್ಲೇ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಟೈಮಲ್ ಮಿಲ್ಸ್​ ಗಾಯಗೊಂಡು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ತೊಡೆಯ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಮಿಲ್ಸ್​ ಮುಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಇಂಗ್ಲೆಂಡ್-ವೇಲ್ಸ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆ ಟೈಮಲ್ ಮಿಲ್ಸ್ ಗಾಯಗೊಂಡಿದ್ದರು. ಗಾಯದ ತೀವ್ರತೆ ಹೆಚ್ಚಾಗಿರುವ ಕಾರಣ ಅವರು ಅರ್ಧದಲ್ಲೇ ಟೂರ್ನಿಯಿಂದ ಹೊರ ನಡೆಯಲು ನಿರ್ಧರಿಸಿದ್ದಾರೆ. ಹೀಗಾಗಿ ಸೆಮಿಫೈನಲ್​ನಲ್ಲಿ ಇಂಗ್ಲೆಂಡ್ ಪರ ಟೈಮಲ್ ಮಿಲ್ಸ್ ಕಣಕ್ಕಿಳಿಯುವುದಿಲ್ಲ ಎಂದು ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ ತಿಳಿಸಿದೆ.

ಜೋಫ್ರಾ ಆರ್ಚರ್ ಅನುಪಸ್ಥಿತಿಯಲ್ಲಿ ಇಂಗ್ಲೆಂಡ್​ ತಂಡ ಡೆತ್ ಓವರ್​ ಸ್ಪೆಷಲಿಸ್ಟ್ ಆಗಿ ತಂಡದಲ್ಲಿ ಕಾಣಿಸಿಕೊಂಡಿದ್ದ ಮಿಲ್ಸ್ ಅಲಭ್ಯತೆಯು ಇದೀಗ ಇಂಗ್ಲೆಂಡ್ ಚಿಂತೆಯನ್ನು ಹೆಚ್ಚಿಸಿದೆ. ಇದೀಗ ಟೈಮಲ್ ಮಿಲ್ಸ್​ ಸ್ಥಾನಕ್ಕೆ ಮೀಸಲು ಆಟಗಾರನಾಗಿದ್ದ ರೀಸ್ ಟೋಪ್ಲೆ ಅವರನ್ನು ಸೇರಿಸಿಕೊಂಡಿದ್ದಾರೆ.

ಶನಿವಾರ ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಕೊನೆಯ ಲೀಗ್ ಪಂದ್ಯವಾಡಲಿದ್ದು, ಈ ಪಂದ್ಯದಲ್ಲಿ ಮಿಲ್ಸ್ ಸ್ಥಾನದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆ ಕಾದು ನೋಡಬೇಕಿದೆ.

ಇಂಗ್ಲೆಂಡ್ ಟಿ20 ತಂಡ ಹೀಗಿದೆ: ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲಾನ್, ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್, ಇಯಾನ್ ಮೊರ್ಗನ್ (ನಾಯಕ), ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಡೇವಿಡ್ ವಿಲ್ಲಿ, ಟಾಮ್ ಕರ್ರನ್, ಮಾರ್ಕ್ ವುಡ್, ಸ್ಯಾಮ್ ಬಿಲ್ಲಿಂಗ್ಸ್, ರೀಸ್ ಟೋಪ್ಲೆ

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: T20 World Cup 2021: ಸೆಹ್ವಾಗ್-ಗಂಭೀರ್ ದಾಖಲೆ ಮುರಿದ ಕೆಎಲ್ ರಾಹುಲ್-ರೋಹಿತ್ ಶರ್ಮಾ

(Tymal Mills ruled out of T20 World Cup 2021)

TV9 Kannada


Leave a Reply

Your email address will not be published. Required fields are marked *