Tamil Nadu Rain: ತಮಿಳುನಾಡಿನಲ್ಲಿ ಮಳೆಯಿಂದ 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಶಾಲೆ, ಕಾಲೇಜು ಬಂದ್ | Tamil Nadu Rain: Red alert in 16 districts including Chennai Flood schools and colleges shut due to Heavy Rainfall


Tamil Nadu Rain: ತಮಿಳುನಾಡಿನಲ್ಲಿ ಮಳೆಯಿಂದ 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ; ಶಾಲೆ, ಕಾಲೇಜು ಬಂದ್

ತಮಿಳುನಾಡು ಮಳೆ

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಪ್ರವಾಹದ ಭೀತಿ ಎದುರಾಗಿದೆ. ಇನ್ನೂ 2-3 ದಿನಗಳ ಕಾಲ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವುದರಿಂದ ಚೆನ್ನೈ ಸೇರಿದಂತೆ 16 ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಮನೆಯೊಳಗೆ ನುಗ್ಗಿರುವ ನೀರನ್ನು ಹೊರ ಹಾಕಲು ಚೆನ್ನೈನಲ್ಲಿ 689 ಮೋಟಾರ್ ಪಂಪ್‌ಗಳು ಮತ್ತು 50 ಬೋಟ್‌ಗಳನ್ನು ಇರಿಸಲಾಗಿದೆ. ಅಕ್ಟೋಬರ್ 1ರಿಂದ ಇಲ್ಲಿಯವರೆಗೆ ಸುರಿಯುತ್ತಿರುವ ಈಶಾನ್ಯ ಮುಂಗಾರಿನಿಂದ ತಮಿಳುನಾಡು ಶೇ. 61ರಷ್ಟು ಹೆಚ್ಚುವರಿ ಮಳೆಯನ್ನು ಪಡೆದಿದೆ. ನಾಳೆ ಕೂಡ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ದಿಂಡುಗಲ್, ಪುದುಕೊಟ್ಟೈ, ತೇಣಿ, ವೆಲ್ಲೂರು, ಅರಿಯಲ್ಲೂರು, ನಾಗಪಟ್ಟಣಂ, ವಿಲ್ಲುಪುರ, ತಿರುವಾರೂರ್, ಮೈಲಾಡುಧುರೈ, ಕಲ್ಲಕುರಿಚಿ, ಕಡಲೂರು, ವಿಲ್ಲಿಪುರಂ, ತಂಜಾವೂರು ಮತ್ತು ಧರ್ಮಪುರಿಯಲ್ಲಿ ಶಾಲಾ ಕಾಲೇಜುಗಳು ಮುಚ್ಚಲಿವೆ.

ನವೆಂಬರ್ 19ರಂದು ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ತಮಿಳುನಾಡು ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವು ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸಿದೆ. ಭಾರತೀಯ ಹವಾಮಾನ ಇಲಾಖೆಯು ಚೆನ್ನೈ ಮತ್ತು ಇತರ 15 ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್ ಘೋಷಿಸಿದೆ. ಚೆನ್ನೈ ಜಿಲ್ಲಾಧಿಕಾರಿಗಳು ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ.

ಇಂದು ಬೆಳಗ್ಗೆಯಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೇ, ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಾಂಚೀಪುರಂ, ಚೆನ್ನೈ ಮತ್ತು ತಿರುವಳ್ಳೂರು ಸೇರಿದಂತೆ 16 ಜಿಲ್ಲೆಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ರೆಡ್ ಅಲರ್ಟ್​ ನೀಡಲಾಗಿದೆ. ಪೆರಂಬಲೂರು, ಅರಿಯಲೂರು, ಧರ್ಮಪುರಿ, ತಿರುಪತ್ತೂರು, ವೆಲ್ಲೂರು ಮತ್ತು ರಾಣಿಪೇಟ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಚೆನ್ನೈ, ತಾಂಬರಂ, ಮೈಲಾಪುರ್, ವೆಲಾಚೇರಿ, ಅಂಬತ್ತೂರು, ಸೈದಾಪೇಟ್, ಕ್ರೋಮ್‌ಪೇಟ್, ರಾಯಪೆಟ್ಟಾ, ಪ್ಯಾರಿಸ್, ಏಕಾತುತಂಗಲ್, ಕೊಟ್ಟೂರ್‌ಪುರಂ, ಅಡ್ಯಾರ್ ಮರೀನಾದಲ್ಲಿ ಭಾರೀ ಮಳೆಯಾಗುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಚೆನ್ನೈನಲ್ಲಿ ಎರಡು ಮತ್ತು ಚೆಂಗಲ್‌ಪೇಟ್, ತಿರುವಳ್ಳೂರು ಮತ್ತು ಕಾಂಚೀಪುರಂನಲ್ಲಿ ತಲಾ ಒಂದು ತಂಡಗಳನ್ನು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ನಿಯೋಜಿಸಿದೆ.

ಇದನ್ನೂ ಓದಿ: Tamil Nadu Rain: ತಮಿಳುನಾಡಿನಲ್ಲಿ ಮಳೆಯ ಅಬ್ಬರ; ಚೆನ್ನೈ ಸೇರಿ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

Tamil Nadu Rain: ತಮಿಳುನಾಡಿನ ಹಲವೆಡೆ ಪ್ರವಾಹದ ಎಚ್ಚರಿಕೆ; ಚೆನ್ನೈನಲ್ಲಿ ವಿಮಾನ ಹಾರಾಟ ವ್ಯತ್ಯಯ, ಶಾಲೆಗಳು ಬಂದ್

TV9 Kannada


Leave a Reply

Your email address will not be published. Required fields are marked *