Tamil Nadu Rain: ತಮಿಳುನಾಡಿನಲ್ಲಿ ಮಳೆಯ ಅಬ್ಬರ; ಚೆನ್ನೈ ಸೇರಿ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ | Tamil Nadu Rain: IMD issues red alert in Chennai nearby districts as heavy rains continue in Tamil Nadu Flood


Tamil Nadu Rain: ತಮಿಳುನಾಡಿನಲ್ಲಿ ಮಳೆಯ ಅಬ್ಬರ; ಚೆನ್ನೈ ಸೇರಿ 4 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ತಮಿಳುನಾಡಿನಲ್ಲಿ ಮಳೆ

ಚೆನ್ನೈ: ದಕ್ಷಿಣ ಭಾರತದಲ್ಲಿ ಮಳೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳದಲ್ಲಿ ನಾಳೆ ಕೂಡ ಮಳೆ ಮುಂದುವರೆಯಲಿದೆ. ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತೊಮ್ಮೆ ರೆಡ್ ಅಲರ್ಟ್ ಘೋಷಿಸಿದೆ. ಚೆನ್ನೈ, ಕಾಂಚೀಪುರಂ, ತಿರುವಳ್ಳೂರ್ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಗುರುವಾರ ರಾತ್ರಿಯವರೆಗೂ ತಮಿಳುನಾಡಿನ ಈ ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇಂದು ಮತ್ತು ನಾಳೆ ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳಲ್ಲಿ ಪ್ರತ್ಯೇಕ ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ಪ್ರದೇಶಗಳಲ್ಲಿ ಇಂದು ಸುಮಾರು 20 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಇಂದು ಮತ್ತು ನಾಳೆ ಮಳೆಯು ಆಂಧ್ರಪ್ರದೇಶದ ದಕ್ಷಿಣ ಭಾಗ ಮತ್ತು ತಮಿಳುನಾಡು ಕರಾವಳಿಯನ್ನು ತಲುಪಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಆಂಧ್ರಪ್ರದೇಶ, ಪುದುಚೇರಿ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಕಳೆದ ಕೆಲವು ದಿನಗಳಿಂದ ತಮಿಳುನಾಡಿನ ಕೆಲವು ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ಚೆನ್ನೈನಲ್ಲಿ ಮಳೆ ಸುರಿಯುತ್ತಿದೆ. ಚೆನ್ನೈ ಮತ್ತು ಪಕ್ಕದ ಜಿಲ್ಲೆಗಳು ಜಲಾವೃತವಾಗಿದೆ. ರಾಜ್ಯದಾದ್ಯಂತ ಅನೇಕ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

ತಮಿಳುನಾಡಿನಲ್ಲಿ 800ಕ್ಕೂ ಹೆಚ್ಚು ಜನರನ್ನು ಚೆನ್ನೈನ ಪರಿಹಾರ ಶಿಬಿರಗಳಿಗೆ ಶಿಫ್ಟ್ ಮಾಡಲಾಗಿದೆ. ಚೆನ್ನೈನ 16ಕ್ಕೂ ಹೆಚ್ಚು ಏರಿಯಾದ ರಸ್ತೆಗಳು ಜಲಾವೃತವಾಗಿದ್ದು, ಚೆನ್ನೈನಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರಿಗೆ ಸುರಕ್ಷಿತ ಪ್ರದೇಶಗಳಲ್ಲಿರಲು ಎಚ್ಚರಿಕೆ ನೀಡಲಾಗಿದೆ. ಗುರುವಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ರಾಣಿಪೇಟ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ತಮಿಳುನಾಡಿನ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ನಾಳೆ ರಾಯಲಸೀಮಾ, ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಉತ್ತರ ತಮಿಳುನಾಡು ಕರಾವಳಿಯಲ್ಲಿ ಅತ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಮನಾಥಪುರಂ ಮತ್ತು ತೂತುಕುಡಿಯಲ್ಲಿ ಕೂಡ ಭಾರೀ ಮಳೆಯಾಗಲಿದೆ ಎಂದು ಎಎನ್‌ಐ ವರದಿ ಮಾಡಿದೆ.

ತಮಿಳುನಾಡಿನ ತಿರುವಣ್ಣಾಮಲೈ, ಕಲ್ಲಕುರಿಚಿ, ಸೇಲಂ, ಪೆರಂಬಲೂರ್, ತಿರುಚಿರಾಪಳ್ಳಿ, ಕರೂರ್, ತಂಜಾವೂರು, ತಿರುವರೂರು, ಪುದುಕ್ಕೊಟ್ಟೈ, ದಿಂಡಿಗಲ್, ಮಧುರೈ, ಥೇಣಿ, ಶಿವಗಂಗಾ, ವಿರುಧುನಗರ, ತೆಂಕಶಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Tamil Nadu rains ತಮಿಳುನಾಡಿನಾದ್ಯಂತ ಮುಂದುವರಿದ ಮಳೆ: ಚೆನ್ನೈ ಮತ್ತು ನೆರೆಯ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Tamil Nadu Rain: ತಮಿಳುನಾಡಿನ ಹಲವೆಡೆ ಪ್ರವಾಹದ ಎಚ್ಚರಿಕೆ; ಚೆನ್ನೈನಲ್ಲಿ ವಿಮಾನ ಹಾರಾಟ ವ್ಯತ್ಯಯ, ಶಾಲೆಗಳು ಬಂದ್

TV9 Kannada


Leave a Reply

Your email address will not be published. Required fields are marked *