Team India: ಭರ್ಜರಿ ಪ್ರದರ್ಶನ ನೀಡಿದ್ರು ಟೀಮ್ ಇಂಡಿಯಾದಲ್ಲಿಲ್ಲ ಚಾನ್ಸ್​: ಎಲ್ಲವೂ ಬದಲಾಗಲಿದೆ ಎಂದ ಯುವ ಆಟಗಾರ | Nitish Rana posts cryptic tweet post T20I snub for India’s Squad


Team India: ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್),

ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಭಾರತ ತಂಡವನ್ನು (Team India) ಪ್ರಕಟಿಸಲಾಗಿದೆ . ವೇಗಿ ಉಮ್ರಾನ್ ಮಲಿಕ್ ಮತ್ತು ಎಡಗೈ ವೇಗದ ಬೌಲರ್ ಅರ್ಷದೀಪ್ ಸಿಂಗ್ ತಂಡದಲ್ಲಿ ಚೊಚ್ಚಲ ಬಾರಿಗೆ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಅನೇಕ ಆಟಗಾರರು ನಿರಾಶೆಗೊಂಡಿದ್ದಾರೆ. ಐಪಿಎಲ್​ನಲ್ಲಿ ಉತ್ತಮವಾಗಿ ಆಡಿದರೂ ಕೆಲ ಆಟಗಾರರಿಗೆ ಮಣೆ ಹಾಕದಿರುವುದು ಇದೀಗ ಚರ್ಚೆಗೆ ಕಾರಣವಾಗಿದ್ದು, ಇದರ ಬೆನ್ನಲ್ಲೇ ಕೋಲ್ಕತ್ತಾ ನೈಟ್ ರೈಡರ್ಸ್‌ನ ಸ್ಟಾರ್ ಬ್ಯಾಟ್ಸ್‌ಮನ್ ನಿತೀಶ್ ರಾಣಾ (nitish rana) ಕೂಡ ಪರೋಕ್ಷವಾಗಿ ತಮ್ಮ ನೋವನ್ನು ಸೋಷಿಯಲ್ ಮೀಡಿಯಾ ಮೂಲಕ ಹೊರಹಾಕಿದ್ದಾರೆ.

ಭಾರತ ತಂಡ ಜೂನ್ 9 ರಿಂದ ದಕ್ಷಿಣ ಆಫ್ರಿಕಾ ವಿರುದ್ದ ಸರಣಿ ಆಡಲಿದೆ. ಈ ಸರಣಿಯಲ್ಲಿ ಉಭಯ ತಂಡಗಳ ನಡುವೆ 5 ಟಿ20 ಪಂದ್ಯಗಳನ್ನು ಆಡಲಾಗುತ್ತದೆ. ಆದರೆ ಈ ಸರಣಿಗೆ ಆಯ್ಕೆ ಮಾಡಲಾದ ತಂಡಕ್ಕೆ ಎಡಗೈ ಬ್ಯಾಟ್ಸ್‌ಮನ್ ನಿತೀಶ್ ರಾಣಾ ಅವರನ್ನು ಪರಿಗಣಿಸಿಲ್ಲ. ಇತ್ತ ಟೀಮ್ ಇಂಡಿಯಾ ಘೋಷಣೆಯ ಬೆನ್ನಲ್ಲೇ ಎಲ್ಲವೂ ಶೀಘ್ರದಲ್ಲೇ ಬದಲಾಗಲಿದೆ ಎಂದು ರಾಣಾ ಟ್ವೀಟ್ ಮಾಡಿದ್ದಾರೆ. ಮೇಲ್ನೋಟಕ್ಕೆ ತಂಡದಲ್ಲಿ ಅವಕಾಶ ಸಿಗದಿರುವುದಕ್ಕೆ ರಾಣಾ ಈ ರೀತಿಯಾಗಿ ಟ್ವೀಟ್ ಮಾಡಿರುವುದು ಸ್ಪಷ್ಟ.

ಏಕೆಂದರೆ ನಿತೀಶ್ ರಾಣಾ ಈ ಬಾರಿಯ ಐಪಿಎಲ್​ನಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿದ್ದರು. ಅಲ್ಲದೆ ಅತ್ಯುತ್ತಮ ಫೀಲ್ಡರ್ ಆಗಿ ಕೂಡ ಗುರುತಿಸಿಕೊಂಡಿದ್ದಾರೆ. ಈ ಹಿಂದೆ ಶ್ರೀಲಂಕಾ ವಿರುದ್ದ 2 ಟಿ20 ಪಂದ್ಯಗಳನ್ನು ಕೂಡ ಆಡಿದ್ದರು. ಅಷ್ಟೇ ಅಲ್ಲದೆ 91 ಐಪಿಎಲ್​ ಪಂದ್ಯಗಳಲ್ಲಿ 28 ರ ಸರಾಸರಿಯಲ್ಲಿ ಒಟ್ಟು 2181 ರನ್ ಗಳಿಸಿದ್ದಾರೆ. ಪ್ರಸಕ್ತ ಐಪಿಎಲ್‌ನಲ್ಲಿ ರಾಣಾ 144ರ ಸ್ಟ್ರೈಕ್ ರೇಟ್‌ನಲ್ಲಿ ಒಟ್ಟು 361 ರನ್​ ಕಲೆಹಾಕಿದ್ದರು. ಇದಾಗ್ಯೂ ತಂಡದಲ್ಲಿ ಚಾನ್ಸ್ ಸಿಗದಿರುವುದರಿಂದ ರಾಣಾ ನಿರಾಸೆ ವ್ಯಕ್ತಪಡಿಸಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದು, ಟಿ20 ಸರಣಿಯಲ್ಲಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ವೇಗಿ ಅವೇಶ್ ಖಾನ್, ವಿಕೆಟ್‌ಕೀಪರ್ ದಿನೇಶ್ ಕಾರ್ತಿಕ್ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ:

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published. Required fields are marked *