Poachgate case ಈ ತಿಂಗಳ ಆರಂಭದಲ್ಲಿ ಶಾಸಕರನ್ನು ಖರೀದಿಸಲು ಯತ್ನ ನಡೆದಿದೆ ಎಂಬ ಆರೋಪದ ತನಿಖೆಗಾಗಿ ರಚಿಸಿದ್ದ ಏಳು ಸದಸ್ಯರ ಎಸ್ಐಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಕೆ. ಚಂದ್ರಶೇಖರ್ ರಾವ್
ಹೈದರಾಬಾದ್: ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (BRS) ನಾಲ್ವರು ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನ ನಡೆಸಿದೆ ಎಂಬ ಆರೋಪದ ಬಗ್ಗೆ ವಿಚಾರಣೆ ನಡೆಸಿದ ತೆಲಂಗಾಣ ಹೈಕೋರ್ಟ್ ಸೋಮವಾರ ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (CBI) ವರ್ಗಾಯಿಸಿದ್ದು, ಕೆ ಚಂದ್ರಶೇಖರ ರಾವ್ (KCR) ನೇತೃತ್ವದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ತಿಂಗಳ ಆರಂಭದಲ್ಲಿ ಶಾಸಕರನ್ನು ಖರೀದಿಸಲು ಯತ್ನ ನಡೆದಿದೆ ಎಂಬ ಆರೋಪದ ತನಿಖೆಗಾಗಿ ರಚಿಸಿದ್ದ ಏಳು ಸದಸ್ಯರ ಎಸ್ಐಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಬಿಜೆಪಿ ಮುಖಂಡ ಹಾಗೂ ವಕೀಲ ರಾಮ್ ಚಂದರ್ ರಾವ್ ಅವರು ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಬಿಆರ್ಎಸ್ ಶಾಸಕರ ಖರೀದಿ ಯತ್ನ ಪ್ರಕರಣವನ್ನು ಹೈಕೋರ್ಟ್ ಸಿಬಿಐಗೆ ವರ್ಗಾಯಿಸಿದೆ. ಹೈಕೋರ್ಟ್ ಕೂಡ ಎಸ್ಐಟಿಯನ್ನು ರದ್ದುಗೊಳಿಸಿದೆ. ನಾವು ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ತಾಜಾ ಸುದ್ದಿ