
ಸಾಂದರ್ಭಿಕ ಚಿತ್ರ
ಗಾಯಗೊಂಡಿರುವ ಪೊಲೀಸ್ ಪೇದೆಯನ್ನು ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶ್ರೀನಗರ: ಸೌರಾ (ಅಂಚಾರ್) ಪ್ರದೇಶದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu Kashmir) ಪೋಲೀಸ್ನ ಮೇಲೆ ಗುಂಡು ಹಾರಿಸಲಾಗಿದೆ. ಉಗ್ರರು ಗುಂಡು ಹಾರಿಸುವಾಗ ಪೊಲೀಸ್ ಸಿಬ್ಬಂದಿಗೆ ಹಾಗೂ ಆತನ ಮಗಳಿಗೆ ಗುಂಡು ತಗುಲಿದೆ. ಈ ಘಟನೆಯಲ್ಲಿ ತಂದೆ- ಮಗಳಿಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಜಮ್ಮು ಕಾಶ್ಮೀರದ ಪೊಲೀಸರು ಇಂದು ಸಂಜೆ ಟ್ವೀಟ್ ಮಾಡಿದ್ದಾರೆ. ಈ ಘಟನೆಯಲ್ಲಿ ಗುಂಡೇಟಿನಿಂದ ಗಾಯಗೊಂಡಿದ್ದ ಪೊಲೀಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಗಾಯಗೊಂಡಿರುವ ಪೊಲೀಸ್ ಪೇದೆಯನ್ನು ಮೊಹಮ್ಮದ್ ಸೈಯದ್ ಖಾದ್ರಿ ಅವರ ಪುತ್ರ ಸೈಫುಲ್ಲಾ ಖಾದ್ರಿ ಎಂದು ಗುರುತಿಸಲಾಗಿದೆ. ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಮಗಳಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಗ್ರರ ದಾಳಿಯ ಸುದ್ದಿಯ ಸ್ವಲ್ಪ ಸಮಯದ ನಂತರ ಜಮ್ಮು ಮತ್ತು ಕಾಶ್ಮೀರದ ಪೋಲೀಸರು ತಮ್ಮ ಗಾಯಗಳಿಂದ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ. ಉಗ್ರರ ಗುಂಡೇಟಿನಿಂದ ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ನಾವು ಹುತಾತ್ಮರಿಗೆ ನಮ್ಮ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇವೆ. ಈ ಸಮಯದಲ್ಲಿ ನಾವು ಅವರ ಕುಟುಂಬದೊಂದಿಗೆ ನಿಲ್ಲುತ್ತೇವೆಂದು ಭರವಸೆ ನೀಡುತ್ತೇವೆ ಎಂದು ಟ್ವೀಟ್ ಮಾಡಲಾಗಿದೆ.