
Image Credit source: Zee News
ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ. ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ವೇಳೆ 1 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir Encounter) ಅನಂತನಾಗ್ ಜಿಲ್ಲೆಯಲ್ಲಿ ಇಂದು (ಜೂನ್ 4) ಬೆಳಗಿನ ವೇಳೆ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್-ಉಲ್-ಮುಜಾಹಿದ್ದೀನ್ (Hizb-ul-Mujahideen) ಸಂಘಟನೆಯ ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ಎನ್ಕೌಂಟರ್ ಕಾರ್ಯಾಚರಣೆ ವೇಳೆ ಮೂವರು ಸೈನಿಕರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾರೆ.
ಭಯೋತ್ಪಾದಕನಿಂದ ಒಂದು ಎಕೆ 47 ರೈಫಲ್ ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. “ನಿಷೇಧಿತ ಭಯೋತ್ಪಾದಕ ಸಂಘಟನೆಯ ಭಯೋತ್ಪಾದಕ ಕಮಾಂಡರ್ ಹೆಚ್.ಎಂ. ನಿಸಾರ್ ಖಾಂಡೆಯನ್ನು ಹತ್ಯೆ ಮಾಡಲಾಗಿದೆ. ಈ ವೇಳೆ 1 ಎಕೆ 47 ರೈಫಲ್ ಸೇರಿದಂತೆ ಆಯುಧಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೂ ಎನ್ಕೌಂಟರ್ ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ರಿಷಿಪೋರಾ ಗ್ರಾಮ ಕಪ್ರಾನ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ರಿಷಿಪೋರಾ ಗ್ರಾಮದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ನ ಜಂಟಿ ತಂಡವು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.