ಸ್ವರೂಪ ನಾಗೇಶ ಸಾರವಾಡ (19) ಮೃತ ವಿದ್ಯಾರ್ಥಿ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಸ್ವರೂಪ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವರೂಪ ನಾಗೇಶ ಸಾರವಾಡ
ವಿಜಯಪುರ: 75ನೇ ವರ್ಷದ ಸ್ವಾತಂತ್ರೋತ್ಸವ(Independence 75) ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಸ್ಕೂಟಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಅಪಘಾತವಾಗಿದೆ. ವಿಜಯಪುರ ನಗರದ ಹೊರ ಭಾಗದ ರಿಂಗ್ ರೋಡ್ ನಲ್ಲಿ ವಿದ್ಯಾರ್ಥಿಗಳ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ(Accident) ಓರ್ವ ವಿದ್ಯಾರ್ಥಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ.
ಸ್ವರೂಪ ನಾಗೇಶ ಸಾರವಾಡ (19) ಮೃತ ವಿದ್ಯಾರ್ಥಿ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಸ್ವರೂಪ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕೂಟಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ತಲಾಷ್ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.