Twitter: ಟ್ವಿಟರ್​ಗೆ ಕಂಟೆಂಟ್ ಮಾಡರೇಷನ್ ಕೌನ್ಸಿಲ್ ಘೋಷಿಸಿದ ಎಲಾನ್ ಮಸ್ಕ್, ಏನಿದು? – Elon Musk Announces Content Moderation Council For Twitter What It Means


ಟ್ವಿಟರ್​ಗೆ ‘ಕಂಟೆಂಟ್ ಮಾಡರೇಷನ್ ಕೌನ್ಸಿಲ್’ ಸ್ಥಾಪಿಸುವುದಾಗಿ ಮೈಕ್ರೋಬ್ಲಾಗಿಂಗ್ ತಾಣದ ನೂತನ ಮಾಲೀಕರಾಗಿರುವ ಉದ್ಯಮಿ ಎಲಾನ್ ಮಸ್ಕ್ ತಿಳಿಸಿದ್ದಾರೆ.

ನ್ಯೂಯಾರ್ಕ್: ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್​ನ (Twitter) ನೂತನ ಮಾಲೀಕರಾಗಿರುವ ಉದ್ಯಮಿ ಎಲಾನ್ ಮಸ್ಕ್ (Elon Musk) ಹೊಸದೊಂದು ಘೋಷಣೆ ಮಾಡಿದ್ದಾರೆ. ಟ್ವಿಟರ್​ಗೆ ‘ಕಂಟೆಂಟ್ ಮಾಡರೇಷನ್ ಕೌನ್ಸಿಲ್’ ಸ್ಥಾಪಿಸುವುದಾಗಿ ತಿಳಿಸಿದ್ದಾರೆ. ಈ ಮಂಡಳಿಯು ಪ್ರಮುಖ ಕಂಟೆಂಟ್​ಗಳು ಮತ್ತು ಖಾತೆ ಮರುಸ್ಥಾಪನೆಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ದೈತ್ಯ ಕಂಪನಿ ಖರೀದಿಸುವ 44 ಶತಕೋಟಿ ಡಾಲರ್ ಒಪ್ಪಂದ ಪೂರ್ಣಗೊಂಡ ಬೆನ್ನಲ್ಲೇ ಮಸ್ಕ್ ಅವರಿಂದ ಈ ಹೇಳಿಕೆ ಮೂಡಿಬಂದಿದೆ.

ವೈವಿಧ್ಯಮಯ ದೃಷ್ಟಿಕೋನದೊಂದಿಗೆ ಕಂಟೆಂಟ್ ಮಾಡರೇಷನ್ ಕೌನ್ಸಿಲ್ ಅನ್ನು ಟ್ವಿಟರ್ ಸ್ಥಾಪಿಸಲಿದೆ. ಈ ಹಿಂದೆ ಕಂಟೆಂಟ್ ಬಗ್ಗೆ ನಿರ್ಧಾರ ಕೈಗೊಳ್ಳಲು ಟ್ವಿಟರ್​ನಲ್ಲಿ ವ್ಯವಸ್ಥೆ ಇರಲಿಲ್ಲ ಎಂದು ಅವರು ಶುಕ್ರವಾರ ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಟ್ವಿಟರ್​ ಕಂಟೆಂಟ್ ವಿಚಾರಕ್ಕೆ ಸಂಬಂಧಿಸಿ ಹಲವು ಊಹಾಪೋಹಗಳು ಹರಿದಾಡಿದ್ದವು. ಇದಕ್ಕೆ ಸ್ಪಷ್ಟನೆ ನೀಡಿ ಶನಿವಾರ ಟ್ವೀಟ್ ಮಾಡಿರುವ ಮಸ್ಕ್, ಒಂದು ವಿಚಾರ ಸ್ಪಷ್ಟಪಡಿಸುತ್ತೇನೆ, ನಾವಿನ್ನೂ ಟ್ವಿಟರ್​ನ ಕಂಟೆಂಟ್ ಮಾಡರೇಷನ್ ನಿಯಮಗಳಲ್ಲಿ ಬದಲಾವಣೆ ಮಾಡಿಲ್ಲ ಎಂದು ತಿಳಿಸಿದ್ದಾರೆ.

‘ಕಂಟೆಂಟ್ ಮಾಡರೇಷನ್ ಕೌನ್ಸಿಲ್’ ಹೇಗಿರಲಿದೆ? ಯಾವ ರೀತಿಯಲ್ಲಿ ಕಾರ್ಯಾಚರಿಸಲಿದೆ ಎಂಬ ಬಗ್ಗೆ ಹೆಚ್ಚಿನ ವಿವರಗಳನ್ನು ಮಸ್ಕ್ ಅವರು ಇನ್ನೂ ಬಹಿರಂಗಪಡಿಸಿಲ್ಲ.

TV9 Kannada


Leave a Reply

Your email address will not be published.