ಭಾರತ ಯುವಪಡೆ
19 ವರ್ಷದೊಳಗಿನವರ ವಿಶ್ವಕಪ್ ಗೆಲ್ಲುವ ದೊಡ್ಡ ಸ್ಪರ್ಧಿ ಎಂದೇ ಪರಿಗಣಿತವಾಗಿರುವ ಟೀಂ ಇಂಡಿಯಾ ಸಂಕಷ್ಟದಲ್ಲಿದೆ. ಐರ್ಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ 6 ಆಟಗಾರರಿಗೆ ಕೊರೊನಾ ತಗುಲಿದೆ. ನಾಯಕ ಯಶ್ ಧುಲ್, ಉಪನಾಯಕ ಎಸ್ಕೆ ರಶೀದ್ ಸೇರಿದಂತೆ ಒಟ್ಟು 6 ಆಟಗಾರರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ ಎಂದು ಮಾಧ್ಯಮ ವರದಿಗಳು ಹೇಳಿವೆ.