UGC NET Result: ಇಂದು ಯುಜಿಸಿ- ನೆಟ್ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡಲು ಈ ವೆಬ್​ಸೈಟ್​ಗೆ ಭೇಟಿ ನೀಡಿ – UGC NET 2022: Result UGC will announce NET results Today how to download score card on ugcnet.nta.nic.in


ಇಂದು ನೆಟ್ ಫಲಿತಾಂಶ ಬಿಡುಗಡೆಯಾಗಲಿದ್ದು, ಮೊದಲ ಹಂತದ ನೆಟ್ ಪರೀಕ್ಷೆಯ ಜುಲೈ 9ರಿಂದ 12ರವರೆಗೆ ನಡೆದಿತ್ತು. 2ನೇ ಹಂತದ ಪರೀಕ್ಷೆ ಸೆಪ್ಟೆಂಬರ್ 20ರಿಂದ 22ರವರೆಗೆ ನಡೆದಿತ್ತು.

UGC NET Result: ಇಂದು ಯುಜಿಸಿ- ನೆಟ್ ಫಲಿತಾಂಶ ಪ್ರಕಟ; ರಿಸಲ್ಟ್​ ನೋಡಲು ಈ ವೆಬ್​ಸೈಟ್​ಗೆ ಭೇಟಿ ನೀಡಿ

ಸಾಂದರ್ಭಿಕ ಚಿತ್ರ

ನವದೆಹಲಿ: ಯುಜಿಸಿ ನೆಟ್ ಫಲಿತಾಂಶದ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಘೋಷಿಸಿದ್ದು, ಇಂದು (ನವೆಂಬರ್ 5) ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (UGC NET) ಫಲಿತಾಂಶವನ್ನು ಬಿಡುಗಡೆ ಮಾಡಲಿದೆ. ನೆಟ್ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ಗಳಾದ nta.ac.in ಮತ್ತು ugcnet.nta.nic.inಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದು.

ಇಂದು ನೆಟ್ ಫಲಿತಾಂಶ ಬಿಡುಗಡೆಯಾಗಲಿದ್ದು, ಈ ಬಗ್ಗೆ ಯುಜಿಸಿ ಅಧ್ಯಕ್ಷ ಮಾಮಿದಾಳ ಜಗದೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. “ಯುಜಿಸಿ- ನೆಟ್ ಫಲಿತಾಂಶಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನವೆಂಬರ್ 5ರಂದು (ಶನಿವಾರ) ಪ್ರಕಟಿಸಲಿದೆ. ಫಲಿತಾಂಶಗಳು NTA ವೆಬ್‌ಸೈಟ್ https://nta.ac.in#UGC-NET ನಲ್ಲಿ ಲಭ್ಯವಿರುತ್ತವೆ ಎಂದು ಅವರು ತಿಳಿಸಿದ್ದಾರೆ.

TV9 Kannada


Leave a Reply

Your email address will not be published.