Ujjain Accident: ಉಜ್ಜಯಿನಿಯಲ್ಲಿ ಟ್ರಕ್​- ಜೀಪ್ ನಡುವೆ ಡಿಕ್ಕಿ; 4 ಶಾಲಾ ಮಕ್ಕಳು ಸಾವು, 11 ಮಂದಿಗೆ ಗಾಯ | Ujjain Accident: 4 School Kids Killed, 11 Injured As Vehicle Collides with Truck in Madhya Pradesh Ujjain


ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಂದು ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗಾಯಗೊಂಡ ಮಕ್ಕಳನ್ನು ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ.

Ujjain Accident: ಉಜ್ಜಯಿನಿಯಲ್ಲಿ ಟ್ರಕ್​- ಜೀಪ್ ನಡುವೆ ಡಿಕ್ಕಿ; 4 ಶಾಲಾ ಮಕ್ಕಳು ಸಾವು, 11 ಮಂದಿಗೆ ಗಾಯ

ಉಜ್ಜಯಿನಿಯಲ್ಲಿ ಅಪಘಾತ

Image Credit source: India.com

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ (Ujjain) ಜಿಲ್ಲೆಯಲ್ಲಿ ಇಂದು ಟ್ರಕ್‌ಗೆ ಜೀಪ್ ಡಿಕ್ಕಿ (Accident) ಹೊಡೆದ ಪರಿಣಾಮ ನಾಲ್ವರು ಶಾಲಾ ಮಕ್ಕಳು ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ. ನಗ್ಡಾದ ಫಾತಿಮಾ ಕಾನ್ವೆಂಟ್ ಶಾಲೆಗೆ ಮಕ್ಕಳು ಶಾಲೆಗೆ ಹೋಗುತ್ತಿದ್ದಾಗ ಉನ್ಹೆಲ್ ಪಟ್ಟಣದ ಝಿರ್ನಿಯಾ ಫಾಟಾ ಬಳಿ ಈ ಅಪಘಾತ ಸಂಭವಿಸಿದೆ ಎಂದು ಉಜ್ಜಯಿನಿಯ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಶುಕ್ಲಾ ತಿಳಿಸಿದ್ದಾರೆ.

ಗಾಯಗೊಂಡ ಮಕ್ಕಳನ್ನು ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಇಂದು ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ 11 ಮಕ್ಕಳ ಪೈಕಿ ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಆಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಉಜ್ಜಯಿನಿ ಜಿಲ್ಲೆಯ ನಗ್ಡಾ ತಹಸಿಲ್‌ನ ನಗ್ಡಾ ಅನ್ಹೆಲ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಒಟ್ಟು 15 ಮಕ್ಕಳು ಜೀಪ್​ನಲ್ಲಿ ಪ್ರಯಾಣಿಸುತ್ತಿದ್ದರು. ಗಾಯಗೊಂಡವರಲ್ಲಿ ಹಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಉಜ್ಜಯಿನಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

TV9 Kannada


Leave a Reply

Your email address will not be published.