ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಬಹುದೊಡ್ಡ ಕುತೂಹಲ ಸೃಷ್ಟಿಸಿದ ವಿಚಾರವಾಗಿತ್ತು. ಈ ಬಾರಿ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸಲಿದ್ದಾರೆ ಎಂದು ಬಲವಾದ ಮೂಲಗಳಿಂದ ತಿಳಿದುಬಂದ ಮಾಹಿತಿ ಎಂದೇ ಹೇಳಲಾಗಿತ್ತು. ಆದರೆ ಕುತೂಹಲಕ್ಕೀಗ ತೆರೆಬಿದ್ದಿದೆ. ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಯಿಂದ ಸ್ಪರ್ಧಿಸುತ್ತಿಲ್ಲ. ಬದಲಿಗೆ ಅವರು ಗೋರಖ್ಪುರ ವಿಧಾನಸಭೆ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂಬುದು ಪಕ್ಕಾ ಆಗಿದೆ.