Haripriya Vasishta Simha Wedding: ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರ ವಿವಾಹ ಮೈಸೂರಿನಲ್ಲಿ ಇಂದು (ಜ.26) ನಡೆದಿದೆ. ಆಪ್ತರು ಮತ್ತು ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ.

ಹರಿಪ್ರಿಯಾ-ವಸಿಷ್ಠ ಸಿಂಹ ವಿವಾಹ
ಕನ್ನಡ ಚಿತ್ರರಂಗದ ಖ್ಯಾತ ಕಲಾವಿದರಾದ ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಅವರು ಹಸೆಮಣೆ ಏರಿದ್ದಾರೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಇಲ್ಲಿ ವಿವಾಹ ನೆರವೇರಬೇಕು ಎಂಬುದು ವಸಿಷ್ಠ ಸಿಂಹ ಅವರ ಆಸೆ ಆಗಿತ್ತು. ಅದರಂತೆ ಈ ಮದುವೆ ನಡೆದಿದೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹಲವು ತಿಂಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿತು. ಗುರು-ಹಿರಿಯರ ಆಶೀರ್ವಾದದೊಂದಿಗೆ ಇಂದು (ಜ.26) ಸಿಂಹಪ್ರಿಯಾ ಕಲ್ಯಾಣ (SimhaPriya Marriage) ನೆರವೇರಿದೆ. ಅಭಿಮಾನಿಗಳು, ಆಪ್ತರು ಹಾಗೂ ಅನೇಕ ಸೆಲೆಬ್ರಿಟಿಗಳು ನವ ದಂಪತಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಡಾಲಿ ಧನಂಜಯ್, ಶಿವರಾಜ್ಕುಮಾರ್, ಅಮೃತಾ ಅಯ್ಯಂಗಾರ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಈ ಶುಭ ಕಾರ್ಯಕ್ಕೆ ಸಾಕ್ಷಿ ಆಗಿದ್ದಾರೆ.
ತಾಜಾ ಸುದ್ದಿ
ಬುಧವಾರ (ಜ.25) ಅರಿಶಿಣ ಶಾಸ್ತ್ರ ನೆರವೇರಿತ್ತು. ಅದರ ಫೋಟೋಗಳನ್ನು ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಹಂಚಿಕೊಂಡಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗಿವೆ. ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಮೆಂಟ್ ಮೂಲಕ ಶುಭ ಹಾರೈಸಿದ್ದಾರೆ. ಚಿತ್ರರಂಗದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಬ್ಯುಸಿ ಆಗಿದ್ದಾರೆ. ಇಬ್ಬರಿಗೂ ಸಖತ್ ಬೇಡಿಕೆ ಇದೆ. ಅವರನ್ನು ಜೊತೆಯಾಗಿ ದೊಡ್ಡ ಪರದೆಯಲ್ಲಿ ನೋಡಬೇಕು ಎಂದು ಅಭಿಮಾನಿಗಳು ಬಯಸಿದ್ದಾರೆ.