ಎರಡು ದಿನಗಳ ಹಿಂದಷ್ಟೇ ಉಪರಾಷ್ಟ್ರಪತಿ ಚುನಾವಣೆ ನಡೆದಿದ್ದು, ನೂತನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Image Credit source: Hindustan Times
ನವದೆಹಲಿ: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು (Venkaiah Naidu) ಅವರಿಗೆ ಇಂದು ರಾಜ್ಯಸಭೆಯಲ್ಲಿ ಬೀಳ್ಕೊಡುಗೆ ನೀಡಲಾಗುವುದು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಇತರ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ವೆಂಕಯ್ಯ ನಾಯ್ಡು ಅವರಿಗೆ ಸ್ಮರಣಿಕೆಯನ್ನು ನೀಡಲಿದ್ದಾರೆ. ಇದಾದ ಬಳಿಕ ವಿಶೇಷ ಭೋಜನದ ವ್ಯವಸ್ಥೆ ಮಾಡಲಾಗಿದೆ.
ಎರಡು ದಿನಗಳ ಹಿಂದಷ್ಟೇ ಉಪರಾಷ್ಟ್ರಪತಿ ಚುನಾವಣೆ ನಡೆದಿದ್ದು, ನೂತನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಆಗಸ್ಟ್ 11ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜಗದೀಪ್ ಧನಕರ್ ಮತ್ತು ಅವರ ಪತ್ನಿಯನ್ನು ವೆಂಕಯ್ಯ ನಾಯ್ಡು ಮತ್ತು ಅವರ ಪತ್ನಿ ಉಷಾ ನಾಯ್ಡು ಉಪರಾಷ್ಟ್ರಪತಿ ನಿವಾಸಕ್ಕೆ ಬರಮಾಡಿಕೊಂಡಿದ್ದರು. ಬಳಿಕ ಆ ಭವನವನ್ನು ಅವರಿಗೆ ಪರಿಚಯಿಸಿ, ಕಾರ್ಯದರ್ಶಿ ಕಚೇರಿಯ ಪರಿಚಯ ಮಾಡಿಕೊಟ್ಟಿದ್ದರು.
Today we are all present here to thank Rajya Sabha Chairman and Vice President M Venkaiah Naidu at the conclusion of his tenure. This is a very emotional moment for this House. Several historic moments of the House are associated with your graceful presence: PM in Rajya Sabha pic.twitter.com/CfLKeiHAnq
— ANI (@ANI) August 8, 2022
ಇಂದು ಕೇಂದ್ರ ಸಚಿವ ಕಿರಣ್ ರಿಜಿಜು ನವದೆಹಲಿ ಅಂತಾರಾಷ್ಟ್ರೀಯ ಮಧ್ಯಸ್ಥಿಕೆ ಕೇಂದ್ರ (ತಿದ್ದುಪಡಿ) ಮಸೂದೆ, 2022 ಅನ್ನು ಲೋಕಸಭೆಯಲ್ಲಿ ಮಂಡಿಸುವ ನಿರೀಕ್ಷೆಯಿದೆ. ರಾಜ್ಯಸಭೆಯಲ್ಲಿ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆ, 2022ಯನ್ನು ಮಂಡಿಸಲಿದ್ದಾರೆ.