Jagdeep Dhankhar Swearing-In: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ
ನವದೆಹಲಿ: ಭಾರತದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ರಾಷ್ಟ್ರಪತಿ ಭವನದಲ್ಲಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದ್ದಾರೆ. ದ್ರೌಪದಿ ಮುರ್ಮು ಕೂಡ ಕಳೆದ ತಿಂಗಳಷ್ಟೇ ಭಾರತದ 15ನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.
Delhi | President Droupadi Murmu administers the oath of office to Vice President-elect Jagdeep Dhankhar
Jagdeep Dhankhar becomes the 14th Vice President of India. pic.twitter.com/26m0SdZPXm
— ANI (@ANI) August 11, 2022
ಜಗದೀಪ್ ಧನಕರ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.