ವಿಶ್ವದಾದ್ಯಂತ ಸದ್ದು ಮಾಡುತ್ತಿರುವ ಅಲ್ಲು ಅರ್ಜುನ್ ಅಭಿನಯದ ಪುಷ್ಪ ಚಿತ್ರ, ಜಾಲತಾಣದಲ್ಲಿ ಹರಿದಾಡುತ್ತಿರುವ ರೀಲ್ಸ್ಗಳ ಮೂಲಕವೇ ಅದರ ಖ್ಯಾತಿ ಇನ್ನಷ್ಟು ಹೆಚ್ಚುವಂತೆ ಮಾಡಿದೆ.
ಈ ಪಟ್ಟಿಗೆ ಇದೀಗ ಕ್ರಿಕೆಟಿಗ ಯಜುವೇಂದ್ರ ಚಾಹಲ್ ಸೇರಿಕೊಂಡಿದ್ದು, ಪುಷ್ಪ ಸಿನಿಮಾದ ಡೈಲಾಗ್ ಒಂದಕ್ಕೆ ಲಿಪ್-ಸಿಂಕ್ ಮಾಡಿರುವ ವೀಡಿಯೊ ಹಂಚಿಕೊಂಡಿದ್ದಾರೆ. ಕ್ರಿಕೆಟಿಗರಾದ ಶಿಖರ್ ಧವನ್, ಯುಜುವೇಂದ್ರ ಚಹಾಲ್ ಮತ್ತು ಕುಲದೀಪ್ ಯಾದವ್ ಮೂವರು ಇರೋ ವಿಡಿಯೋವನ್ನ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಲಾಗಿದೆ.
ಈ ವಿಡಿಯೋಗೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಾಮೆಂಟ್ ಮೂಲಕ ಅವರ ನಟನಾ ಕೌಶಲ್ಯವನ್ನು ಹಾಡಿ ಹೊಗಳುತ್ತಿದ್ದಾರೆ.