VIDEO: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಅಫ್ಘಾನಿಸ್ತಾನದಲ್ಲಿ ಸಂಭ್ರಮ..! – T20 World Cup 2022: Afghanistan Fans in Kabul Celebrate India’s Win Over Pakistan In Kannada News


India vs Pakistan: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

VIDEO: ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ, ಅಫ್ಘಾನಿಸ್ತಾನದಲ್ಲಿ ಸಂಭ್ರಮ..!

ಸಾಂದರ್ಭಿಕ ಚಿತ್ರ


T20 World Cup 2022: ಭಾರತ-ಪಾಕಿಸ್ತಾನ್ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೀಗ ಬರೀ ಎರಡು ದೇಶಗಳ ಕ್ರಿಕೆಟ್ ಪ್ರೇಮಿಗಳ ಪ್ರತಿಷ್ಠೆಯಾಗಿ ಮಾತ್ರ ಉಳಿದಿಲ್ಲ. ಪಾಕಿಸ್ತಾನದ ನೆರೆರಾಷ್ಟ್ರ ಅಫ್ಘಾನಿಸ್ತಾನ್ (Afghanistan) ಕ್ರಿಕೆಟ್ ಪ್ರೇಮಿಗಳಿಗೂ ಭಾರತ-ಪಾಕ್ ಮುಖಾಮುಖಿ ಮಹತ್ವದ ಪಂದ್ಯವಾಗಿ ಮಾರ್ಪಟ್ಟಿದೆ. ಇದೇ ಕಾರಣದಿಂದಾಗಿ ಅಫ್ಘಾನ್ ಕ್ರಿಕೆಟ್ ಪ್ರೇಮಿಗಳು ಬದ್ಧವೈರಿಗಳ ಕದನದ ವೇಳೆ ಟೀಮ್ ಇಂಡಿಯಾಗೆ ಬೆಂಬಲ ಸೂಚಿಸುತ್ತಾರೆ. ಇದಕ್ಕೆ ಒಂದು ಕಾರಣ ಅಫ್ಘಾನಿಸ್ತಾನದಲ್ಲಿನ ಉಗ್ರ ಚಟುವಟಿಕೆಗಳಿಗೆ ಪಾಕ್ ಪರೋಕ್ಷ ಬೆಂಬಲ ನೀಡುತ್ತಿರುವುದು ಎನ್ನಬಹುದು.

ಇನ್ನು ಅಘ್ಘಾನ್​ನಲ್ಲಿ ಪಾಕ್ ಪ್ರೇರಿತ ದಬ್ಬಾಳಿಕೆಯನ್ನು ಸಹಿಸದ ಹೊಸ ತಲೆಮಾರಿನ ಯುವಕರು ಭಾರತದ ಮೇಲೆ ವಿಶೇಷ ಪ್ರೀತಿಯನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಅಫ್ಘಾನಿಸ್ತಾನಕ್ಕೆ ಭಾರತವು ಸದಾ ಬೆಂಬಲವಾಗಿ ನಿಂತಿದೆ. ಇದೇ ಕಾರಣದಿಂದಾಗಿ ಪಾಕ್-ಭಾರತ ನಡುವಣ ಪಂದ್ಯದ ವೇಳೆ ಬಹುತೇಕ ಅಘ್ಘಾನ್ನರು ಟೀಮ್ ಇಂಡಿಯಾಗೆ ಬೆಂಬಲ ಸೂಚಿಸುತ್ತಾರೆ.

ಇದೀಗ ಇದಕ್ಕೆ ತಾಜಾ ಉದಾಹರಣೆಯಾಗಿ ಅಫ್ಘಾನಿಸ್ತಾನ್ ಕ್ರಿಕೆಟ್ ಪ್ರೇಮಿಗಳ ವಿಡಿಯೋವೊಂದು ವೈರಲ್ ಆಗಿದೆ. ಮೆಲ್ಬೋರ್ನ್​ನಲ್ಲಿ ಅಕ್ಟೋಬರ್ 23 ರಂದು ಪಾಕಿಸ್ತಾನ್ ವಿರುದ್ಧ ಟೀಮ್ ಇಂಡಿಯಾ ಗೆಲ್ಲುತ್ತಿದ್ದಂತೆ ಅಫ್ಘಾನಿಸ್ತಾನದ ಕಾಬೂಲ್ ನಗರದಲ್ಲಿ ಕ್ರಿಕೆಟ್​ ಪ್ರೇಮಿಗಳು ಕೇಕೆ ಹಾಕುತ್ತಾ ಸಂಭ್ರಮಿಸಿದ್ದರು. ಇದರ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಒಟ್ಟಿನಲ್ಲಿ ಭಾರತ-ಪಾಕಿಸ್ತಾನ್ ನಡುವಣ ಕದನದಲ್ಲಿ ಭಾರತೀಯರು ಮಾತ್ರವಲ್ಲದೆ, ಅತ್ತ ಅಫ್ಘಾನ್ನರು ಸಂಭ್ರಮಿಸುತ್ತಿರುವುದು ಪಾಕ್ ಕ್ರಿಕೆಟ್​ ಪ್ರೇಮಿಗಳ ಕಣ್ಣು ಕೆಂಪಾಗಿಸಿರುವುದಂತು ಸುಳ್ಳಲ್ಲ.

ಟೀಮ್ ಇಂಡಿಯಾಗೆ ರೋಚಕ ಜಯ:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಟೀಮ್ ಇಂಡಿಯಾ 160 ರನ್​ಗಳ ಟಾರ್ಗೆಟ್ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅದರಂತೆ ಅಂತಿಮ 3 ಓವರ್​ಗಳ ವೇಳೆ ಪಂದ್ಯವು ರೋಚಕಘಟ್ಟದತ್ತ ಸಾಗಿತ್ತು. ಅದರಂತೆ ಕೊನೆಯ 18 ಎಸೆತಗಳಲ್ಲಿ ಟೀಮ್ ಇಂಡಿಯಾಗೆ 48 ರನ್​ಗಳ ಅವಶ್ಯಕತೆಯಿತ್ತು. ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು.

TV9 Kannada


Leave a Reply

Your email address will not be published.