Vir Das: ಭಾರತದ ಕುರಿತು ವಿವಾದಿತ ಹೇಳಿಕೆ ನೀಡಿದ್ದ ಕಾಮಿಡಿಯನ್ ವೀರ್ ದಾಸ್ ವಿರುದ್ಧ ದೂರು ದಾಖಲು | Vir Das issues clarification on his two indias monologue here is complete details


Vir Das: ಭಾರತದ ಕುರಿತು ವಿವಾದಿತ ಹೇಳಿಕೆ ನೀಡಿದ್ದ ಕಾಮಿಡಿಯನ್ ವೀರ್ ದಾಸ್ ವಿರುದ್ಧ ದೂರು ದಾಖಲು

ವೀರ್ ದಾಸ್

ಕಾಮಿಡಿಯನ್ ವೀರ್‌ ದಾಸ್ ಕೆನಡಿ ಸೆಂಟರ್​ನಲ್ಲಿ ನೀಡಿದ್ದ ‘ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ’ ಎಂಬ ಸ್ವಗತ ತೀವ್ರ ವಿವಾದ ಸೃಷ್ಟಿಸಿದೆ. ಆ ಸ್ವಗತದಲ್ಲಿ ವೀರ್ ದಾಸ್ ಮಾತನಾಡುತ್ತಾ, ‘‘ನಾನು ಎರಡು ರೀತಿಯ ಭಾರತದಿಂದ ಬಂದಿದ್ದೇನೆ. ಭಾರತದಲ್ಲಿ ಹಗಲು ವೇಳೆ ಸ್ತ್ರೀಯರನ್ನು ಪೂಜಿಸುತ್ತೇವೆ, ರಾತ್ರಿ ವೇಳೆ ಸ್ತ್ರೀಯರನ್ನು ಗ್ಯಾಂಗ್‌ರೇಪ್ ಮಾಡುತ್ತೇವೆ. ಭಾರತದಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ 900 ಇರುತ್ತೆ, ಆದರೂ ರಾತ್ರಿ ಆಕಾಶದಲ್ಲಿ ನಕ್ಷತ್ರ ನೋಡಲು ಬಯಸುತ್ತೇವೆ. ನಾವು ಪರಸ್ಪರರನ್ನು ಆಲಂಗಿಸುತ್ತೇವೆ, ಆದರೆ ಮಾಸ್ಕ್ ಧರಿಸಲ್ಲ’’ ಎಂದು ಹೇಳಿದ್ದರು. ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ‘ಭಾರತ, ಹಿಂದುತ್ವವನ್ನು ವೀರ್ ದಾಸ್ ಅಪಮಾನ ಮಾಡಿದ್ದಾರೆ. ಆದ್ದರಿಂದ ಅವರು ಕ್ಮೆ ಕೇಳಬೇಕು’ ಎಂದು ಸಾಮಾಜಿಕ ಜಾಲತಾಣದಲ್ಲಿ ಆಗ್ರಹ ಕೇಳಿಬಂದಿದೆ. ಈ ಹೇಳಿಕೆಯ ಕುರಿತಂತೆ ವೀರ್ ದಾಸ್ ಪ್ರತಿಕ್ರಿಯಿಸಿ, ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:

TV9 Kannada


Leave a Reply

Your email address will not be published. Required fields are marked *