Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ | Viral Video Mahila Congress President Netta DSouza Spits on Cops during protest BJP Slams Shameful Act


Viral Video: ಪ್ರತಿಭಟನೆ ವೇಳೆ ಪೊಲೀಸರ ಮುಖಕ್ಕೆ ಉಗುಳಿದ ಕಾಂಗ್ರೆಸ್ ನಾಯಕಿ; ನಿಮಗೆ ನಾಚಿಕೆಯೇ ಇಲ್ವಾ? ಎಂದ ಬಿಜೆಪಿ

ಪೊಲೀಸರ ಮುಖಕ್ಕೆ ಉಗಿದ ಕಾಂಗ್ರೆಸ್ ನಾಯಕಿ

ಪೊಲೀಸರ ಮುಖಕ್ಕೆ ಎಂಜಲು ಉಗಿಯುತ್ತಿರುವ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜ ವಿಡಿಯೋ ವೈರಲ್ ಆಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನ್ಯಾಷನಲ್ ಹೆರಾಲ್ಡ್​ ಪ್ರಕರಣದಲ್ಲಿ (National Herald Case) ಇಡಿ ಸಮನ್ಸ್​ ಜಾರಿ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್​ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ನಿನ್ನೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜ (Netta D’Souza) ಪ್ರತಿಭಟನಾ ಸ್ಥಳದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅವರ ಮುಖಕ್ಕೆ ಉಗುಳಿದ್ದಾರೆ.

ಪೊಲೀಸರ ಮುಖಕ್ಕೆ ಎಂಜಲು ಉಗಿಯುತ್ತಿರುವ ನೆಟ್ಟಾ ಡಿಸೋಜ ಅವರ ವಿಡಿಯೋ ವೈರಲ್ ಆಗಿದ್ದು, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳು ಪ್ರತಿಭಟನಾನಿರತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದಾಗ ನೆಟ್ಟಾ ಡಿಸೋಜ ಬಸ್​ನ ಬಾಗಿಲಲ್ಲಿ ನಿಂತುಕೊಂಡು ಪೊಲೀಸರ ಮೇಲೆ ಉಗುಳುವುದು ವೀಡಿಯೊದಲ್ಲಿ ಸೆರೆಯಾಗಿದೆ. ಈ ವೇಳೆ ಹಲವಾರು ಮಹಿಳಾ ಕಾಂಗ್ರೆಸ್ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಘಟನೆ ನಡೆದ ಬೆನ್ನಲ್ಲೇ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಮತ್ತು ಅವರ ಮೇಲೆ ಉಗುಳಿದ್ದಕ್ಕಾಗಿ ಡಿಸೋಜಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. “ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸುವಾಗ, ಪ್ರತಿಭಟನಾಕಾರರಲ್ಲಿ ಒಬ್ಬರಾದ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ಅಡ್ಡಿಪಡಿಸಿದರು. ಪೊಲೀಸರ ಮೇಲೆ ಹಲ್ಲೆಯನ್ನೂ ಮಾಡಿ, ಅವರ ಮೇಲೆ ಉಗುಳಿದರು. ಇದಕ್ಕಾಗಿ ಕಾನೂನಿನ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

TV9 Kannada


Leave a Reply

Your email address will not be published.