ಬೆಂಗಳೂರು ಹವಾಮಾನ (ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕರ್ನಾಟಕದ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಚಿಕ್ಕಬಳ್ಳಾಪುರ ಸೇರಿ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಿದೆ. ರಾಜ್ಯದಲ್ಲಿ ಇದೀಗ ಮಳೆ ಕಡಿಮೆಯಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಲಡಾಖ್, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ದೆಹಲಿ, ರಾಜಸ್ಥಾನ, ಪಂಜಾಬ್, ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಈ ಬಾರಿ ಭಾರೀ ಮಳೆಯಾಗಿದೆ. ಇಂದಿನಿಂದ ಜ. 21ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಶುಕ್ರವಾರದವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ಮತ್ತು ಶನಿವಾರದಂದು ಈ ಪ್ರದೇಶದಲ್ಲಿ ಮಿಂಚು ಮತ್ತು ಆಲಿಕಲ್ಲುಗಳೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಇನ್ನೆರಡು ದಿನ ಜಮ್ಮು ಕಾಶ್ಮೀರ ಮತ್ತು ಲಡಾಖ್ನಲ್ಲಿ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಇಂದಿನಿಂದ ಜನವರಿ 20ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್ನಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ಇಂದು ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರ ಮಧ್ಯಪ್ರದೇಶದ ಭಾಗಗಳಲ್ಲಿ ದಟ್ಟವಾದ ಮಂಜು ಆವರಿಸುತ್ತದೆ. ಜನವರಿ 22ರಂದು ಹಿಮಾಚಲ ಪ್ರದೇಶದ ಮೇಲೆ ಭಾರೀ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಅಲ್ಲದೆ, ಜನವರಿ 21ರಿಂದ 23ರ ಅವಧಿಯಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಉತ್ತರ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ, ಜನವರಿ 22ರಂದು ಗರಿಷ್ಠ ತೀವ್ರತೆಯೊಂದಿಗೆ ಮಳೆಯ ಮುನ್ಸೂಚನೆ ಇದೆ. IMD ಪ್ರಕಾರ, ಜನವರಿ 22ರಂದು ಮಿಂಚಿನೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ (IMD) ಇಂದು ಉತ್ತರ ಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ ಮತ್ತು ಮಧ್ಯಪ್ರದೇಶದಂತಹ ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಲಘುವಾಗಿ ಮಳೆಯಾಗಲಿದೆ. ಜನವರಿ 21ರಿಂದ 23ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ಸಂಸ್ಥೆ ತಿಳಿಸಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಜನವರಿ 20ರಿಂದ 22ರವರೆಗೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ರಾಜಸ್ಥಾನ, ಉತ್ತರ ಪ್ರದೇಶ, ಉತ್ತರ ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ದಟ್ಟವಾದ ಮಂಜು ಇರುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಮುಂದಿನ 3 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಚಳಿ ವಾತಾವರಣ ಇರಲಿದೆ. ಮುಂದಿನ 2 ದಿನಗಳಲ್ಲಿ ಉತ್ತರ ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮತ್ತು ಮುಂದಿನ 24 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನದಲ್ಲಿ ಶೀತ ವಾತಾವರಣ ಇರಲಿದೆ. ಪಂಜಾಬ್, ಹರಿಯಾಣ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲೂ ಮಳೆ ಹೆಚ್ಚಾಗಲಿದೆ. ಈ ಮಳೆಯು ಜನವರಿ 21ರಂದು ಪ್ರಾರಂಭವಾಗುತ್ತದೆ. ಜನವರಿ 22ರಿಂದ ಮಳೆ ಹೆಚ್ಚಾಗಲಿದೆ.
ಮುಂದಿನ 2 ದಿನಗಳ ಕಾಲ ಆಂಧ್ರ ಪ್ರದೇಶ, ರಾಯಲಸೀಮಾ, ತಮಿಳುನಾಡು ಮತ್ತು ಕೇರಳದ ಒಳನಾಡಿನಲ್ಲಿ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ರಾಜಸ್ಥಾನ, ಪೂರ್ವ ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಬಿಹಾರ, ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ರಾತ್ರಿ ಮತ್ತು ಬೆಳಿಗ್ಗೆ ಪ್ರತ್ಯೇಕ ಭಾಗಗಳಲ್ಲಿ ದಟ್ಟವಾದ ಮಂಜುಗಡ್ಡೆಯನ್ನು ಸೂಚಿಸಿದೆ
ಮುಂದಿನ 2 ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಳೆಯಾಗಲಿದೆ.