1/5
ಸೋಶಿಯಲ್ ಮೀಡಿಯಾದಲ್ಲಿ ನಟಿ ಯಾಮಿ ಗೌತಮ್ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಆ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಗಮನ ಸೆಳೆಯುತ್ತಾರೆ.
2/5
ಇನ್ಸ್ಟಾಗ್ರಾಮ್ನಲ್ಲಿ ಇತ್ತೀಚೆಗೆ ಯಾಮಿ ಗೌತಮ್ ಹಂಚಿಕೊಂಡಿರುವ ಫೋಟೋಗಳು ಅವರ ಅಭಿಮಾನಿಗಳಿಗೆ ಇಷ್ಟ ಆಗಿವೆ. ಸಿಂಪಲ್ ಡ್ರೆಸ್ನಲ್ಲಿಯೂ ಯಾಮಿ ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸುತ್ತಿದ್ದಾರೆ.
3/5
ಯಾಮಿ ಗೌತಮ್ ಅವರು ಬಾಲಿವುಡ್ನಲ್ಲಿ ಬಹುಬೇಡಿಕೆ ಕಲಾವಿದೆ ಆಗಿ ಗುರುತಿಸಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು ಕನ್ನಡದ ‘ಉಲ್ಲಾಸ ಉತ್ಸಾಹ’ ಸಿನಿಮಾ ಮೂಲಕ. ಆ ಚಿತ್ರದಲ್ಲಿ ‘ಗೋಲ್ಡನ್ ಸ್ಟಾರ್’ ಗಣೇಶ್ ಜತೆ ತೆರೆಹಂಚಿಕೊಂಡಿದ್ದರು.
4/5
ವಿಕ್ಕಿ ಕೌಶಲ್ ಜತೆ ನಟಿಸಿದ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾದಿಂದ ಯಾಮಿ ಗೌತಮ್ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ಹಲವು ಹಿಂದಿ ಸಿನಿಮಾಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ.
5/5
‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಸಿನಿಮಾದ ನಿರ್ದೇಶಕ ಆದಿತ್ಯ ಧಾರ್ ಅವರನ್ನೇ ಯಾಮಿ ಗೌತಮ್ ಈ ವರ್ಷ ಜೂನ್ನಲ್ಲಿ ಮದುವೆಯಾದರು. ಮದುವೆ ಬಳಿಕವೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.