ಕಳೆದ 10 ದಿನಗಳಿಂದ ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ.

Image Credit source: Hindustan Times
ಶ್ರೀನಗರ: ತಿಹಾರ್ ಜೈಲಿನಲ್ಲಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ (Yasin Malik) ತನ್ನ ಪ್ರಕರಣದಲ್ಲಿ ನ್ಯಾಯಯುತ ವಿಚಾರಣೆಯನ್ನು ಕೋರಿ ದೆಹಲಿಯ ತಿಹಾರ್ ಜೈಲಿನಲ್ಲಿ (Delhi Tihar Jail) ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆ ಉಪವಾಸ ಸತ್ಯಾಗ್ರಹವನ್ನು ಅವರು ಸೋಮವಾರ ಸಂಜೆ ಸ್ಥಗಿತಗೊಳಿಸಿದ್ದಾರೆ. ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ (ಜೆಕೆಎಲ್ಎಫ್) ಮುಖ್ಯಸ್ಥನಾಗಿರುವ ಯಾಸಿನ್ ಮಲಿಕ್ ಭಯೋತ್ಪಾದನೆಗೆ ಫಂಡಿಂಗ್ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಎರಡು ಪ್ರಕರಣಗಳಲ್ಲಿ ಖುದ್ದು ಹಾಜರಾಗುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದರು.
ಕಳೆದ 10 ದಿನಗಳಿಂದ ತಿಹಾರ್ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಸೋಮವಾರ ಸಂಜೆ ತಮ್ಮ ಮನವಿಯನ್ನು ಸಂಬಂಧಿತ ಅಧಿಕಾರಿಗಳಿಗೆ ತಲುಪಿಸಲಾಗಿದೆ ಎಂದು ತಿಳಿಸಿದ ನಂತರ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ರುಬಯ್ಯ ಸಯೀದ್ ಅಪಹರಣ ಪ್ರಕರಣದ ವಿಚಾರಣೆ ನಡೆಸುತ್ತಿರುವ ಜಮ್ಮು ನ್ಯಾಯಾಲಯದಲ್ಲಿ ತಾನು ದೈಹಿಕವಾಗಿ ಹಾಜರಾಗಲು ಅನುಮತಿ ನೀಡಬೇಕೆಂಬ ಅವರ ಮನವಿಗೆ ಕೇಂದ್ರ ಸರ್ಕಾರ ಉತ್ತರಿಸಲು ನಿರಾಕರಿಸಿದಾಗ ಯಾಸಿನ್ ಮಲಿಕ್ ಜುಲೈ 22ರಂದು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುವ ನಿರ್ಧಾರ ಮಾಡಿದ್ದರು.